ಬೆಂಗಳೂರು | ಕೆಐಎ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.

“ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್‌ನಿಂದ 2023ರ ಆಂತರಿಕ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಮನ್ನಣೆಯನ್ನು ಪಡೆದ ಏಕೈಕ ಭಾರತೀಯ ವಿಮಾನ ನಿಲ್ದಾಣವಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ 2ನ ಒಳಾಂಗಣ ವಿನ್ಯಾಸ 2023ರ ವಿಶ್ವ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ” ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಗುರುವಾರ ತಿಳಿಸಿದೆ.

“ಬೆಂಗಳೂರು ವಿಮಾನ ನಿಲ್ದಾಣವು ಈ ಗೌರವಾನ್ವಿತ ಮನ್ನಣೆಯನ್ನು ಪಡೆದ ಏಕೈಕ ಭಾರತೀಯ ವಿಮಾನ ನಿಲ್ದಾಣವಾಗಿದ್ದು, ಜಾಗತಿಕ ಮಟ್ಟದಲ್ಲಿ ಅಸಾಧಾರಣ ವಿನ್ಯಾಸ ಮತ್ತು ವಾಸ್ತುಶಿಲ್ಪದ ಕಡೆಗೆ ಅದರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಪ್ರಸಿದ್ಧ ಫ್ಯಾಷನ್ ಡಿಸೈನರ್ ಎಲೀ ಸಾಬ್ ರವರ ಅಧ್ಯಕ್ಷತೆಯಲ್ಲಿ ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್‌ 2023 ಕಾರ್ಯಕ್ರಮ ನಡೆಯಿತು. ಬೆಂಗಳೂರು ವಿಮಾನ ನಿಲ್ದಾಣವನ್ನು ಜಾಗತಿಕವಾಗಿ ಉನ್ನತ ವಿಮಾನ ನಿಲ್ದಾಣಗಳ ಪಟ್ಟಿಗೆ ಸೇರಿದೆ” ಎಂದು ಬಿಐಎಎಲ್‌ ಪ್ರಕಟಣೆ ತಿಳಿಸಿದೆ.

Advertisements

‘ಟರ್ಮಿನಲ್ ಇನ್ ಎ ಗಾರ್ಡನ್’ ಎಂದು ಕರೆಯಲ್ಪಡುವ ಟರ್ಮಿನಲ್ 2 ವಿಮಾನ ನಿಲ್ದಾಣವನ್ನು 2022ರ ನವೆಂಬರ್ 11ರಂದು ಉದ್ಘಾಟನೆ ಮಾಡಲಾಯಿತು. 2,55,661 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಈ ಟರ್ಮಿನಲ್ ಅನ್ನು ನಾಲ್ಕು ಅಡಿಪಾಯದ ಕಂಬಗಳ ಮೇಲೆ ನಿರ್ಮಿಸಲಾಗಿದೆ. ವರ್ಷಕ್ಕೆ 25 ಮಿಲಿಯನ್ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಈ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ ಎಂದು ಬಿಐಎಎಲ್‌ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪರಿಶೀಲನೆ

ಟರ್ಮಿನಲ್‌ 2 ಸಂಪೂರ್ಣವಾಗಿ ಸಂಸ್ಕರಿಸಿದ ಬಿದಿರಿನಿಂದ ರಚಿಸಲಾಗಿದೆ. ಒಳಾಂಗಣಗದಲ್ಲಿ ಹಸಿರಿನ ವಾತಾವರಣ ತುಂಬಿದೆ. ಇಟ್ಟಿಗೆ ಗೋಡೆಗಳು ಹಾಗು ಕೃತಕ ಜಲಪಾತದಿಂದ ಅಲಂಕೃತಗೊಂಡಿದೆ. ಒಂದು ವಿಶಾಲವಾದ ಒಳಾಂಗಣ ಉದ್ಯಾನವನವನ್ನೇ ಹೊಂದಿದೆ. ಹಾಗೆಯೇ, ಮೇಲ್ಭಾಗದಲ್ಲಿ ಗಂಟೆಯೊಳಗಿರುವ ಸಸ್ಯಗಳು ಸಹ ಟರ್ಮಿನಲ್‌ನ ಸೌಂದರ್ಯವನ್ನು ಹೆಚ್ಚಿಸುತ್ತದೆ.

2015 ರಲ್ಲಿ ಸ್ಥಾಪನೆಯಾದ ಪ್ರಿಕ್ಸ್ ವರ್ಸೈಲ್ಸ್, ಸಾಂಸ್ಕೃತಿಕ ಸಂಚಾಲಕರಾಗಿ ಬುದ್ಧಿವಂತ ಸಮರ್ಥನೀಯತೆ ಮೇಲೆ ಕೇಂದ್ರೀಕರಿಸುತ್ತದೆ. ನಾವೀನ್ಯತೆ, ಸೃಜನಶೀಲತೆ, ಸ್ಥಳೀಯ ಪರಂಪರೆಯ ಪ್ರತಿಬಿಂಬ, ಪರಿಸರ ದಕ್ಷತೆ ಮತ್ತು ಸಾಮಾಜಿಕ ಸಂವಹನದ ಮೌಲ್ಯಗಳನ್ನು ಅಂಗೀಕರಿಸುತ್ತದೆ ಎಂದು ಬಿಐಎಎಲ್ ಹೇಳಿಕೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X