ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

Date:

Advertisements

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ ಆತನನ್ನು ಅಪಹರಿಸಿ ಹಲ್ಲೆ ಮಾಡಿ ಹಣ ಎಗರಿಸಿದ್ದ ಖದೀಮರನ್ನು ಇದೀಗ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅಲೋಕ್ ರಾಣಾ ಅಪಹರಣಕ್ಕೊಳಗಾದವರು. ಇವರು ಆಸ್ಟ್ರೇಲಿಯಾ ಪ್ರಜೆ. ಇವರು ಮೋನಿಶ್​​​, ಲೋಕೇಶ್​​​, ಕಿಶೋರ್​​, ರವಿ, ದಿಲೀಪ್​​​​​​​​ ಹಾಗೂ ಸತೀಶ್​​​​ ಬಂಧಿತರು. ಆರೋಪಿ ಮೋನಿಶ್ ಟ್ಯಾಟೋ ಹಾಕುವ ಕೆಲಸ ಮಾಡುತ್ತಿದ್ದನು. ಇತರ ಆರೋಪಿಗಳು ಬಟ್ಟೆ ವ್ಯಾಪಾರ, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.

ಆಸ್ಟ್ರೇಲಿಯಾ ಪ್ರಜೆಯಾಗಿರುವ ಅಲೋಕ್ ರಾಣಾ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನೆಲೆಸಿರುವ ತನ್ನ ಅಣ್ಣ ಅಮಿತ್​​ ರಾಣಾನನ್ನು ಭೇಟಿಯಾಗಲು ನಗರಕ್ಕೆ ಬಂದಿದ್ದನು.

Advertisements

ಡ್ರಗ್ಸ್‌ಗೆ ಅಡಿಕ್ಟ್‌ ಆಗಿದ್ದ ಅಲೋಕ್ ರಾಣಾ ಡಾರ್ಕ್​ ವೆಬ್​ ಮೂಲಕ ಮೊನೀಶ್ ಬಳಿ ಡಗ್ಸ್​​ ಖರೀದಿಸುತ್ತಿದ್ದನು. ಅಲ್ಲದೇ, ಆರೋಪಿ ಮೊನೀಶ್ ಜತೆಗೆ​ ಸಂಪರ್ಕ ಕೂಡ ಹೊಂದಿದ್ದನು.

ಬೆಂಗಳೂರಿಗೆ ಬಂದ ನಂತರ ಅಲೋಕ್ ರಾಣಾ ಮೋನಿಶ್​ನಿಂದ ಐದು ಬಾರಿ ಗಾಂಜಾ ಖರೀದಿ ಮಾಡಿದ್ದನು. ಇದರಿಂದ ಈತನ ಬಳಿ ಹೆಚ್ಚು ಹಣ ಇರಬಹುದು ಎಂದು ಭಾವಿಸಿದ್ದ ಮೋನಿಶ್ ತನ್ನ ಸಹಚರರೊಂದಿಗೆ ಸೇರಿ ಅಲೋಕ್​ನನ್ನು ಅಪಹರಣ ಮಾಡಿದ್ದಾರೆ.

ಅಲೋಕ್ ರಾಣಾನನ್ನು ಅಪಹರಿಸಿ ಆತನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಆತನ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹78 ಸಾವಿರ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಜತೆಗೆ, ಆತನ ಅಣ್ಣ ಅಮಿತ್ ಖಾತೆಯಿಂದ ₹40 ಸಾವಿರ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ; ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನ ಕೊಚ್ಚಿ ಕೊಲೆ

ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಅಲೋಕ್ ರಾಣಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಡ್ರಗ್ಸ್​ ವಿಷಯ ಬಹಿರಂಗವಾಗುತ್ತದೆ ಎಂದು ತಿಳಿದು 15 ದಿನಗಳ ಬಳಿಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರು ಆಗ್ನೇಯ ಡಿಸಿಪಿ ಬಾಬಾಗೆ ಮಾಹಿತಿ ನೀಡಲಾಗಿದೆ. ಬಳಿಕ, ಬೊಮ್ಮನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X