ರೌಡಿಶೀಟರ್‌ನೊಬ್ಬನನ್ನು ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಆರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಹದೇವ್ ಕೊಲೆಯಾದ ರೌಡಿಶೀಟರ್.
ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಹದೇವ್ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾನೆ. ಈ ವೇಳೆ, ರೌಡಿಶೀಟರ್ ಸಹದೇವನನ್ನು ಟಾರ್ಗೆಟ್ ಮಾಡಿದ್ದ ಆರು ದುಷ್ಕರ್ಮಿಗಳು ಮೂರು ಬೈಕ್ಗಳಲ್ಲಿ ಬಂದು ಸಹದೇವ್ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಐಸಿಎಂಆರ್‌ಗೆ ಆಮ್ ಆದ್ಮಿ ಪಕ್ಷ ದೂರು
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.