ಬೆಂಗಳೂರು | ಮಾರ್ಚ್ 21 ಮತ್ತು 22 ರಂದು ಲಘು ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ನಗರದಲ್ಲಿ ಮಾರ್ಚ್‌ 21 ಮತ್ತು ಮಾರ್ಚ್‌ 22ರಂದು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಇಡೀ ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ನೀರಿನ ಸಮಸ್ಯೆ ಉಂಟಾಗಿದ್ದು, ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಅಲ್ಲದೇ, ಬಿಸಿಲಿನ ತಾಪಮಾನ ಏರಿಕೆಯಾಗಿದ್ದು ಜನರು ಈ ಬಿಸಿಲಿನ ತಾಪ ತಡೆಕೊಳ್ಳುವಲ್ಲಿ ಹೈರಾಣಾಗಿದ್ದಾರೆ. ಬಿಸಿಲಿನ ಬೇಗೆಗೆ ಕೊಂಚ ತಂಪೆರೆಯಲು ಈ ಮಳೆ ಅವಶ್ಯಕವಾಗಿದೆ.

ತಾಪಮಾನದ ಹೆಚ್ಚಳ ಮತ್ತು ಮಳೆಯಾಗದಿರುವ ಪರಿಣಾಮ ಇದೀಗ ಹಲವಾರು ಕೊಳವೆಬಾವಿಗಳು ಬತ್ತಿದ್ದು, ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರುವರಿಯಲ್ಲಿ ಕನಿಷ್ಠ ಮಳೆ ಬೀಳುತ್ತದೆ. ಸರಾಸರಿ 18.5 ಮಿ.ಮೀ ಮಾಸಿಕ ಮಳೆಯೊಂದಿಗೆ ಮಾರ್ಚ್ ತಿಂಗಳು ಪೂರ್ವ ಮುಂಗಾರು ಋತುವಿನ ಆರಂಭವನ್ನು ಸೂಚಿಸುತ್ತದೆ. ನೈಋತ್ಯ ಮಾನ್ಸೂನ್ ಅವಧಿಯಲ್ಲಿ ಮೇ ತಿಂಗಳಿನಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸರಾಸರಿ 213 ಮಿಮೀ ಮಳೆಯಾಗಲಿದೆ ಎಂದು ಹೇಳಿದೆ.

ಮಾರ್ಚ್ 21 ರಿಂದ 23ರ ನಡುವೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಭಾರತದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಸುರಿಯಲು ಆರಂಭಿಸಿದೆ. ಭಾನುವಾರದಂದು ಉತ್ತರ ಒಳನಾಡಿನಲ್ಲಿ ಲಘು ಮಳೆಯಾದ ನಂತರ, ಬೆಂಗಳೂರು ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಉಳಿದ ಭಾಗಗಳಲ್ಲಿ ಈ ಬುಧವಾರದಿಂದ (ಮಾರ್ಚ್ 20) ಆರ್ದ್ರ ವಾತಾವರಣವನ್ನು ಅನುಭವಿಸುವ ಮುನ್ಸೂಚನೆ ಇದೆ.

ಈ ಸುದ್ದಿ ಓದಿದ್ದೀರಾ? ಹೋಳಿ ಹಬ್ಬ | ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ಗೆ ಕಾವೇರಿ ನೀರು, ಬೋರ್‌ವೆಲ್‌ ನೀರು ಬಳಸದಿರಿ ಎಂದ ಜಲಮಂಡಳಿ

ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಅಂದರೆ, ಮಾರ್ಚ್ 20 ರಿಂದ ಮಾರ್ಚ್ 23ರ ವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಉತ್ತರ ಒಳ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ಹೆಚ್ಚುವರಿಯಾಗಿ, ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳು ಸೇರಿದಂತೆ ಮಧ್ಯ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುರಹಂಕಾರಿಗಳಿಗೆ ಉತ್ತರ ಕೊಡಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

ಎನ್​ಡಿಎ ಸರ್ಕಾರದ ಪ್ರಧಾನಿ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ...

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...