ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

Date:

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಏ.25ರಂದು ನಾನಾ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

“ಬೆಂಗಳೂರಿನ 3 ಲೊಕಸಭಾ ಕ್ಷೇತ್ರ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್ ಸೇರಿದಂತೆ ಎಲ್ಲ ಮತಗಟ್ಟೆ ಸಾಮಾಗ್ರಿಗಳನ್ನು ತೆಗೆದುಕೊಂಡು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ಪೊಲೀಸ್ ಬಂದೋಬಸ್ತ್ ಮೂಲಕ ತೆರಳಲಿದ್ದಾರೆ. ಎಲ್ಲ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ”‌‌ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏ.26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ

“ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದೆ. 7 ಗಂಟೆಯೊಳಗಾಗಿ ಮತದಾನ ಪೂರ್ಣಗೊಳ್ಳಲಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ” ಎಂದರು.

“ಎಲ್ಲ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್ (ಇವಿಎಂ), ಕಂಟ್ರೋಲ್ ಯುನಿಟ್ (ಸಿಯು), ವಿವಿ ಪ್ಯಾಟ್‌ಗಳನ್ನು ಮತಗಟ್ಟೆಗಳಿಗೆ ತಲುಪಿಸಲು ಈಗಾಗಲೇ ರೂಟ್ ಸಿದ್ದಪಡಿಸಿಕೊಳ್ಳಲಾಗಿದೆ. ಆ ಪ್ರಕಾರ ಒಂದು ಬಸ್‌ನಲ್ಲಿ 5 ರಿಂದ 6 ಮತಗಟ್ಟೆಗಳ ಅಧಿಕಾರಿಗಳು ತೆರಳಲಿದ್ದಾರೆ. ಇಂದು ಮಧ್ಯಾಹ್ನದ ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ” ಎಂದು ಹೇಳಿದರು.

ಅಣುಕು ಮತದಾನದ ವೇಳೆ ಇವಿಎಂನಲ್ಲಿ ಲೋಪದೋಷಗಳು ಕಂಡುಬಂದರೆ, ಸೆಕ್ಟರ್ ಅಧಿಕಾರಿ ಮೂಲಕ ಕನಿಷ್ಠ 10 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ.

ಮತಗಟ್ಟೆ ಅಧಿಕಾರಿಗಳಿಗೆ ಕಿಟ್ ವಿತರಣೆ

ನಗರದ 28 ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು, ಇವಿಎಂ, ಸಿಯು, ವಿವಿ ಪ್ಯಾಟ್, ಮತದಾನದ ದಿನ ಅಗತ್ಯವಿರುವ ಚೆಕ್ ಲಿಸ್ಟ್ ಪ್ರಕಾರ ಎಲ್ಲ ರೀತಿಯ ಸಾಮಾಗ್ರಿಗಳು, ಮತಗಟ್ಟೆಗಳಲ್ಲಿ ರಾತ್ರಿ ಉಳಿಯಲು‌ ಮತಗಟ್ಟೆ ಅಧಿಕಾರಿಗಳಿಗೆ ಬೇಕಾದಂತಹ ವ್ಯವಸ್ಥೆ ಮಾಡಲಾಗಿದೆ.

ನಗರದಲ್ಲಿರುವ 8,984 ಮತಗಟ್ಟೆಗಳಲ್ಲಿ ಏ.26ರಂದು ಮತದಾನ ನಡೆಯಲಿದ್ದು, ಎಲ್ಲ ಸಿಬ್ಬಂದಿ ಏ.25ರಂದು ಬೆಳಿಗ್ಗೆ ಮಸ್ಟರಿಂಗ್‌ ಕೇಂದ್ರಗಳಿಂದ ಸಾಮಗ್ರಿಗಳನ್ನು ಸಂಗ್ರಹಿಸಿ ಮತಗಟ್ಟೆಗೆ ತೆರಳಿದ್ದಾರೆ. ಎಲ್ಲ ಮಸ್ಟರಿಂಗ್ ಕೇಂದ್ರಗಳಲ್ಲೂ ಚುನಾವಣಾ ಕರ್ತವ್ಯನಿರತ ಮತದಾರರಿಗಾಗಿ ಮತದಾನ ಸೌಲಭ್ಯ ಕೇಂದ್ರ ತೆರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ಪರಿಶೀಲನೆಯ ವೇಳೆ ವಲಯ ಜಂಟಿ ಆಯುಕ್ತರುಗಳಾದ ಮೊಹ್ಮದ್ ನಯೀಮ್ ಮೊಮಿನ್, ಬಾಲಶೇಖರ್, ಸಹಾಯಕ ಚುನಾವಣಾಧಿಕಾರಿಗಳಾದ ಸುರೇಶ್, ಪ್ರಮೋದ್ ಪಾಟೀಲ್, ಬಾಲಪ್ಪ ಹಂದಿಗುಂದ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...