ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

Date:

Advertisements

ಬೆಂಗಳೂರಿನ ನಗರತ್​ಪೇಟೆಯ ಮೊಬೈಲ್ ಶಾಪ್‌ವೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಗಿದೆ ಎಂದು ಗಲಾಟೆ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆಯ ಪೊಲೀಸರು ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳಾದ ಸುಲೇಮಾನ್, ತರುಣ್, ಶನವಾಜ್, ರೋಹಿತ್ ಹಾಗೂ ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ನಗರತ್​ಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮಾ.17ರ ಸಾಯಂಕಾಲ ಕೃಷ್ಣ ಟೆಲಿಕಾಂ ಅಂಗಡಿ ಮಾಲೀಕ ಮುಕೇಶ್ ಎಂಬಾತನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ ಎಂದು ತಿಳಿದುಬಂದಿದೆ.

Advertisements

ಈ ಘಟನೆಗೆ ಸಂಬಂಧಿಸಿದಂತೆ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಲೌಡ್ ಸ್ಪೀಕರ್ ಜೋರಾಗಿ ಇಟ್ಟಿದ್ದಕ್ಕೆ ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿದೆ’ ಎಂದು ದೂರುದಾರ ಮುಕೇಶ್ ಆರೋಪಿಸಿದ್ದಾರೆ.

ಆತನ ದೂರಿನ ಮೇರೆಗೆ ಸುಲೇಮಾನ್, ಶಾನವಾಝ್, ರೋಹಿತ್, ದಾನಿಶ್, ತರುಣಾ ಅಲಿಯಾಸ್ ದಡಿಯ ಹಾಗೂ ಇತರರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ 1860ರ ಅಡಿಯಲ್ಲಿ ಬರುವ ಕಲಂ 506, 504, 149, 307, 323 8 324 ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವು ಮೊಬೈಲ್ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಈ ಪ್ರಕರಣಕ್ಕೆ ಕೋಮು ಬಣ್ಣ ಬಳೆಯಲು ಯತ್ನಿಸಿದ ಬಿಜೆಪಿ, ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದೆ. ಜೋರಾದ ಧ್ವನಿಯಲ್ಲಿ ಹಾಡು ಹಾಕಿದ್ದಕ್ಕೆ ಗಲಾಟೆ ನಡೆದಿದ್ದನು. ಯುವಕ ಪೂಜೆ ಮಾಡುವ ಸಮಯದಲ್ಲಿ ಹನುಮಾನ ಚಾಲೀಸ್‌ ಹಾಕಿದ್ದಕ್ಕೆ ಮತಾಂಧರ ಗುಂಪೊಂದು ಯುವಕನ ಮೇಲೆ ಹಲ್ಲೆ ಮಾಡಿದೆ ಎಂದು ಪ್ರಕರಣವನ್ನು ತಿರುಚಿದೆ.

ಅಲ್ಲದೇ, ಸ್ಥಳಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆಯಲ್ಲಿ ಎಲ್ಲ ಕಡೆಯೂ ಹನುಮಾನ್ ಚಾಲೀಸಾ ಮತ್ತು ಹನುಮ ಧ್ವಜ ಹಾಕುವಂತೆ ಕರೆ ನೀಡಿ ಕೋಮು ಧ್ವೇಷ ಹರಡಲು ಯತ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X