ಬೆಂಗಳೂರು | ಮಾರ್ಚ್ ತಿಂಗಳ ನಂತರ ಅತಿ ಕಡಿಮೆ ತಾಪಮಾನ ದಾಖಲು

Date:

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ ಬಿಸಿಲಿನ ವಾತಾವರಣಕ್ಕೆ ಬೇಸತ್ತಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಜತೆಗೆ, ಬೆಂಗಳೂರಿನಲ್ಲಿ ಮಾರ್ಚ್‌ನಿಂದ ಕನಿಷ್ಠ ತಾಪಮಾನ ದಾಖಲಾಗಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ಪ್ರಕಾರ, “ಶುಕ್ರವಾರ ನಗರದಲ್ಲಿ ಗರಿಷ್ಠ ತಾಪಮಾನ 31.9 ಡಿಗ್ರಿ ಸೆಲ್ಸಿಯಸ್‌ನಲ್ಲಿದೆ. ಫೆಬ್ರುವರಿಯಲ್ಲಿ ಕೇವಲ ಒಂದೆರಡು ದಿನ ಮಾತ್ರ ತಾಪಮಾನ ಕಡಿಮೆಯಾಗಿತ್ತು. ತೀವ್ರವಾದ ಬಿಸಿ ವಾತಾವರಣದ ದೀರ್ಘಾವಧಿಯ ನಂತರ ಶುಕ್ರವಾರ ಗರಿಷ್ಠ 31.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿಗೆ ಮೇ ತಿಂಗಳ ಸರಾಸರಿಗಿಂತ 1.3 ಡಿಗ್ರಿ ಕಡಿಮೆಯಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಏಪ್ರಿಲ್‌ನಲ್ಲಿ ಮಳೆಯ ಕೊರತೆಯಿಂದ ಬೆಂಗಳೂರು ಅಧಿಕ ತಾಪಮಾನ ಅನುಭವಿಸಿತು. ಮಾರ್ಚ್‌ 22ರಂದು ಗರಿಷ್ಠ ತಾಪಮಾನ 32.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಏಪ್ರಿಲ್‌ನಲ್ಲಿ ದಾಖಲಿಸಿದ ಅತ್ಯಂತ ಕಡಿಮೆ ತಾಪಮಾನ ಎಂದರೆ ಅದು 34 ಡಿಗ್ರಿ ಸೆಲ್ಸಿಯಸ್ ಆಗಿದೆ ”ಎಂದು ಐಎಂಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಮಳೆಯು ತಾಪಮಾನ ತಣ್ಣಗಾಗಲು ಸಹಾಯ ಮಾಡಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ” ಎಂದು ಐಎಂಡಿ ವಿಜ್ಞಾನ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಅವರು ಮುನ್ಸೂಚನೆಯನ್ನು ನೀಡಿದ್ದಾರೆ.

“ಈ ಮೇ ತಿಂಗಳಲ್ಲಿ ನಗರವು ಸಾಮಾನ್ಯ ಮಳೆಯನ್ನು ಪಡೆಯುತ್ತದೆ ಎಂದು ನಮಗೆ ವಿಶ್ವಾಸವಿದೆ. ನಿರೀಕ್ಷೆಯಂತೆ ಮಳೆ ಬಂದರೆ ತಾಪಮಾನ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಮೇ ತಿಂಗಳಲ್ಲಿ ಆರಂಭವಾದ ಮಳೆಯಿಂದಾಗಿ ತಾಪಮಾನವು ಗಮನಾರ್ಹವಾಗಿ ಕುಸಿತ ಕಂಡಿದೆ. ಮೇ 1ರಂದು 38.1 ಡಿಗ್ರಿ ಸೆಲ್ಸಿಯಸ್‌ನಿಂದ 10 ದಿನಗಳ ಅಂತರದಲ್ಲಿ 31.9 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ನಗರದಲ್ಲಿ ಮೇ 14ರವರೆಗೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯು ಹೆಚ್ಚಾಗಿ ಸಂಜೆ ಅಥವಾ ರಾತ್ರಿಯಲ್ಲಿ ಸಂಭವಿಸುತ್ತದೆ. ಮುಂದಿನ ಎರಡು ದಿನಗಳಲ್ಲಿ ತಾಪಮಾನವು ಕ್ರಮವಾಗಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಮೂಲ : ಡೆಕ್ಕನ್ ಹೆರಾಲ್ಡ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...