ಬೆಂಗಳೂರು | ಮಹಾಶಿವರಾತ್ರಿ ದಿನ ರೌಡಿಶೀಟರ್ ಕೊಲೆ: ಆರು ಜನರ ಬಂಧನ

Date:

ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.

- Advertisement -

35 ವರ್ಷದ ರೌಡಿ ಶಿವ ಅಲಿಯಾಸ್ ವರ್ತೆ ಎಂಬಾತನನ್ನು ಸೆಂಟ್ರಲ್ ಬೆಂಗಳೂರಿನ ಕಾಟನ್‌ಪೇಟೆಯ ಅಂಜನಪ್ಪ ಗಾರ್ಡನ್‌ನ ಓಣಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಳೆಯ ದ್ವೇಷ ಹಾಗೂ ಸ್ಥಳೀಯ ಗ್ಯಾಂಗ್‌ಗಳ ನಡುವಿನ ಕಿತ್ತಾಟವೇ ಈ ಕೊಲೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಟೀಫನ್ ಅಲಿಯಾಸ್ ಸೈಲೆಂಟ್, ಚಂದ್ರಶೇಖರ್, ಸಿಂಬಾ ಅಲಿಯಾಸ್ ಸಿಂಬು, ಶೇಖರ್ ಅಲಿಯಾಸ್ ಡೋರಿ, ಮಣಿ ಮತ್ತು ಕಿರಣ ಬಂಧಿತರು.

ಹತ್ಯೆಯಾದ ಶಿವ ಮಾರ್ಚ್ 8ರಂದು ರಾತ್ರಿ 9.30ರ ಸುಮಾರಿಗೆ ಪಾರ್ಟಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಹೊಂಚು ಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇನ್ನಿತರ ಮಾಹಿತಿ ಆಧರಿಸಿ ಶಂಕಿತರನ್ನು ಪತ್ತೆಹಚ್ಚಿದ್ದಾರೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಡಂಪಿಂಗ್ ಯಾರ್ಡ್‌ನಲ್ಲಿ ಸಿಗರೇಟ್‌ನಿಂದ ಹೊತ್ತಿಕೊಂಡ ಬೆಂಕಿ

“ಆರೋಪಿ ಚಂದ್ರಶೇಖರನ ಆಪ್ತ ಸ್ನೇಹಿತನಿಗೆ ಶಿವ ಥಳಿಸಿದ್ದನು. ಈ ಮಧ್ಯೆ, ಶಿವು ಸಿಂಬು ಮತ್ತು ಡೋರಿಯೊಂದಿಗೆ ಜಗಳವಾಡಿದ್ದನು. ಈ ಮೂವರು ವ್ಯಕ್ತಿಗಳು ಶಿವನೊಂದಿಗೆ ವೈಯಕ್ತಿಕ ದ್ವೇಷ ಹೊಂದಿದ್ದರು. ಇನ್ನೂ ಮೂವರನ್ನು ಕರೆತಂದು, ಸ್ಥಳ ಆಯ್ಕೆ ಮಾಡಿ ಹಬ್ಬದ ದಿನ ರಾತ್ರಿಯೇ ಕೊಲೆ ಮಾಡಿದ್ದಾರೆ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

2020ರಲ್ಲಿ ರೌಡಿಶೀಟರ್ ಪ್ರಭಾಕರ್ ಅಲಿಯಾಸ್ ಸಾಕ್ರೆ ಕೊಲೆ ಪ್ರಕರಣದಲ್ಲಿ ಶಿವನನ್ನು ಬಂಧಿಸಲಾಗಿತ್ತು. ಕೊಲೆಯ ನಂತರ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶಿವ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು. ಶಿವ ಜಾಮೀನಿನ ಮೇಲೆ ಹೊರಗಿದ್ದರೂ ವಿಚಾರಣೆ ಪ್ರಗತಿಯಲ್ಲಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...