ಬೆಂಗಳೂರು | ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನ ಹತ್ಯೆ: ಮೂವರ ಬಂಧನ

Date:

Advertisements

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನವೊದರಲ್ಲಿ ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಯೋಗೇಶ್ (23) ಕೊಲೆಯಾದ ಯುವಕ. ಹನುಮಂತನಗರದ ಗ್ಯಾರೇಜ್‌ನಲ್ಲಿ ಉದ್ಯೋಗಿಯಾಗಿದ್ದ 23 ವರ್ಷದ ಯೋಗೇಶ್‌ನ ಕೊಲೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಚೇತನ್, ರಂಗ ಮತ್ತು ಪವನ್ ಬಂಧಿತರು. ಇವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರು.

“ಬಂಧಿತರು ಶಿವರಾತ್ರಿ ಆಚರಣೆಯ ಸಮಯದಲ್ಲಿ ಯೋಗೇಶ್ ಅವರೊಂದಿಗೆ ಜಗಳ ಆರಂಭಿಸಿದ್ದಾರೆ. ಡ್ಯಾನ್ಸ್ ಮಾಡುವಾಗ ತಮ್ಮ ಕಾಲಿನ ಮೇಲೆ ಯೋಗೇಶ್ ಹೆಜ್ಜೆ ಹಾಕಿದ ಎಂದು ಆತನನ್ನು ಬಂಧಿತರು ನಿಂದಿಸಿದ್ದಾರೆ. ಅಲ್ಲಿದ್ದ ಇತರರು ಮಧ್ಯ ಪ್ರವೇಶಿಸಿ ಜಗಳವನ್ನು ಅಂತ್ಯಗೊಳಿಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.

Advertisements

“ಈ ಘಟನೆ ಬಳಿಕ, ಡ್ಯಾನ್ಸ್ಮುಗಿಸಿ ಯೋಗೇಶ್ ಶ್ರೀನಗರದಲ್ಲಿರುವ ತನ್ನ ಮನೆಗೆ ಬೈಕ್ನಲ್ಲಿ ವಾಪಸ್ಆಗುವಾಗನಾಲ್ವರು ಯುವಕರು ಹಿಂಬಾಲಿಸಿ, ಆತನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ, ಯೋಗೇಶ್ ಕಾಂಪೌಂಡ್ ಗೋಡೆ ಹಾರಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ತನಿಖೆ ವೇಳೆ, ಯೋಗೇಶ್ಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದು ತಿಳಿದುಬಂದಿದೆ.

“ಕಾಂಪೌಂಡ್ ಗೋಡೆಯ ಮೇಲೆ ಅಳವಡಿಸಲಾದ ಗಾಜಿನ ಚೂರುಗಳಿಂದ ಸುತ್ತುವರಿದ ಇಟ್ಟಿಗೆ ಗೋಡೆಯ ಬಳಿ ಯೋಗೇಶ್ ಅವರ ಶವ ಪತ್ತೆಯಾಗಿದೆ” ಎಂದು ತನಿಖಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

“ಆರಂಭದಲ್ಲಿ, ಗೋಡೆಯನ್ನು ಹಾರುವ ಪ್ರಯತ್ನದಲ್ಲಿದ್ದಾಗ ಯೋಗೇಶ್ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾವಿಸಿದ್ದರು. ಆದರೆ, ತನಿಖೆ ಬಳಿಕ ಯೋಗೇಶ್ ಮೈಮೇಲೆ ಇರಿತದ ಗಾಯಗಳು ಕಂಡುಬಂದಿವೆ” ಎಂದಿದ್ದಾರೆ.

“ಅಪರಾಧ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಶಂಕಿತರನ್ನು ಪತ್ತೆಹಚ್ಚಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X