ಬೆಂಗಳೂರು | ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನ ಹತ್ಯೆ: ಮೂವರ ಬಂಧನ

Date:

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನವೊದರಲ್ಲಿ ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

- Advertisement -

ಯೋಗೇಶ್ (23) ಕೊಲೆಯಾದ ಯುವಕ. ಹನುಮಂತನಗರದ ಗ್ಯಾರೇಜ್‌ನಲ್ಲಿ ಉದ್ಯೋಗಿಯಾಗಿದ್ದ 23 ವರ್ಷದ ಯೋಗೇಶ್‌ನ ಕೊಲೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಚೇತನ್, ರಂಗ ಮತ್ತು ಪವನ್ ಬಂಧಿತರು. ಇವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬಂಧಿತರು ಶಿವರಾತ್ರಿ ಆಚರಣೆಯ ಸಮಯದಲ್ಲಿ ಯೋಗೇಶ್ ಅವರೊಂದಿಗೆ ಜಗಳ ಆರಂಭಿಸಿದ್ದಾರೆ. ಡ್ಯಾನ್ಸ್ ಮಾಡುವಾಗ ತಮ್ಮ ಕಾಲಿನ ಮೇಲೆ ಯೋಗೇಶ್ ಹೆಜ್ಜೆ ಹಾಕಿದ ಎಂದು ಆತನನ್ನು ಬಂಧಿತರು ನಿಂದಿಸಿದ್ದಾರೆ. ಅಲ್ಲಿದ್ದ ಇತರರು ಮಧ್ಯ ಪ್ರವೇಶಿಸಿ ಜಗಳವನ್ನು ಅಂತ್ಯಗೊಳಿಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.

“ಈ ಘಟನೆ ಬಳಿಕ, ಡ್ಯಾನ್ಸ್‌ ಮುಗಿಸಿ ಯೋಗೇಶ್ ಶ್ರೀನಗರದಲ್ಲಿರುವ ತನ್ನ ಮನೆಗೆ ಬೈಕ್‌ನಲ್ಲಿ ವಾಪಸ್‌ ಆಗುವಾಗ​ ನಾಲ್ವರು ಯುವಕರು ಹಿಂಬಾಲಿಸಿ, ಆತನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ, ಯೋಗೇಶ್ ಕಾಂಪೌಂಡ್ ಗೋಡೆ ಹಾರಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ತನಿಖೆ ವೇಳೆ, ಯೋಗೇಶ್‌ಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದು ತಿಳಿದುಬಂದಿದೆ.

“ಕಾಂಪೌಂಡ್ ಗೋಡೆಯ ಮೇಲೆ ಅಳವಡಿಸಲಾದ ಗಾಜಿನ ಚೂರುಗಳಿಂದ ಸುತ್ತುವರಿದ ಇಟ್ಟಿಗೆ ಗೋಡೆಯ ಬಳಿ ಯೋಗೇಶ್ ಅವರ ಶವ ಪತ್ತೆಯಾಗಿದೆ” ಎಂದು ತನಿಖಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

“ಆರಂಭದಲ್ಲಿ, ಗೋಡೆಯನ್ನು ಹಾರುವ ಪ್ರಯತ್ನದಲ್ಲಿದ್ದಾಗ ಯೋಗೇಶ್ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾವಿಸಿದ್ದರು. ಆದರೆ, ತನಿಖೆ ಬಳಿಕ ಯೋಗೇಶ್ ಮೈಮೇಲೆ ಇರಿತದ ಗಾಯಗಳು ಕಂಡುಬಂದಿವೆ” ಎಂದಿದ್ದಾರೆ.

“ಅಪರಾಧ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಶಂಕಿತರನ್ನು ಪತ್ತೆಹಚ್ಚಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...