ಬೆಂಗಳೂರು | ಮೇ 24ರಿಂದ ಲಾಲ್‌ಬಾಗ್‌ನಲ್ಲಿ ‘ಮಾವು-ಹಲಸು ಮೇಳ’

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

- Advertisement -

ಮೇಳದಲ್ಲಿ ಸುಮಾರು 60 ಮಳಿಗೆಗಳು ಇರಲಿವೆ. ಕೊಪ್ಪಳದ ಕೇಸರ್, ಚಿತ್ರದುರ್ಗ ಮತ್ತು ತುಮಕೂರಿನ ಬಾದಾಮಿ, ರಸಪುರಿ, ಬೆನಿಶಾ, ಮಲಗೋವಾ, ಇಮಾಮ್‌ಪಸಂದ್‌ ನಂತಹ ಪ್ರಸಿದ್ಧ ತಳಿಗಳೂ ಸೇರಿದಂತೆ ಸೇಂಧೂರ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ತಳಿಯ ಹಣ್ಣುಗಳು ಇರಲಿವೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳ ಜತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್‌, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

ಹಣ್ಣುಗಳ ರಾಜ ಮಾವಿನ ಹಣ್ಣು ಮಾರುಕಟ್ಟೆಗಳಲ್ಲಿ ಸದ್ಯ ದುಬಾರಿಯಾಗಿದೆ. ನೀರಿಲ್ಲದೇ, ಬಿಸಿಲಿನ ಝಳಕ್ಕೆ ಈ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದೆ. ಹೀಗಾಗಿ, ದರ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನ ಜನ ಖರೀದಿಸುತ್ತಿದ್ದಾರೆ. ಪ್ರತಿವರ್ಷ ಮಾವಿನ ಸೀಸನ್​ನಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಟನ್‌ ಮಾವು ಉತ್ಪಾದನೆಯಾಗಬೇಕಿತ್ತು. ಆದರೆ, ಮಳೆಯಿಲ್ಲದ ಪರಿಣಾಮ ಹಾಗೂ ಅಧಿಕ ತಾಪಮಾನದಿಂದಾಗಿ ಕೇವಲ 4-5 ಲಕ್ಷ ಟನ್‌ನಷ್ಟು ಮಾವಿನ ಫಸಲು ಕಡಿಮೆ ಬಂದಿದೆ. ಹೀಗಾಗಿ, ಈ ಬಾರಿ ಮೇಳದಲ್ಲಿ ದರ ಕೊಂಚ ಹೆಚ್ಚು ಇರಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಲಾಲ್‌ಬಾಗ್‌ನಲ್ಲಿ ಮಾವಿನ ಮೇಳ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭಗೊಂಡಿದೆ. ಲಾಲ್‌ಬಾಗ್‌ನ ಮಾವು ಮತ್ತು ಹಲಸಿನ ಮೇಳದಲ್ಲಿ ಜಿಕೆವಿಕೆ, ಐಐಎಚ್‌ಆರ್ ಸೇರಿದಂತೆ ಇತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ.

“ಮಾವು ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ರಸಪುರಿ ಮತ್ತು ತೋತಾಪುರಿಯಂತಹ ತಳಿಯ ಹಣ್ಣುಗಳನ್ನು ಮೇಳಕ್ಕೆ ತರಲಿದ್ದಾರೆ” ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಸಿ.ಜಿ.ನಾಗರಾಜ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...