ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಕ್ರಮ; ಒಂದು ತಿಂಗಳಲ್ಲಿ 986 ಮಳೆ ನೀರು ಇಂಗುಗುಂಡಿ ನಿರ್ಮಾಣ

Date:

ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ ಪ್ರಾರಂಭವಾಗುವ ಮುನ್ನವೇ ಬೆಂಗಳೂರಿನಾದ್ಯಂತ 986 ಮಳೆ ನೀರು ಇಂಗು ಗುಂಡಿಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ನಿರ್ಮಾಣ ಮಾಡಿದೆ.

- Advertisement -

“ಮಳೆ ನೀರು ಕೊಯ್ಲು ಅಳವಡಿಸಿಕೊಂಡಿರುವ ಹಲವಾರು ಕಟ್ಟಡಗಳಲ್ಲಿ ಮಳೆ ನೀರಿನ ಇಂಗುಗುಂಡಿಗಳನ್ನು ರಚಿಸದೇ ಇರುವ ಕಾರಣ ಅಂತರ್ಜಲ ಮರುಪೂರಣ ಸರಿಯಾಗಿ ಆಗುತ್ತಿಲ್ಲ. ಮರುಪೂರಣ ಆಗದೇ ಇರುವ ಕಾರಣ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಲೇ ಇದೆ. ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಜನರು ಮಳೆ ನೀರು ಮರುಪೂರಣಕ್ಕೆ ಇಂಗು ಗುಂಡಿಗಳನ್ನ ನಿರ್ಮಿಸಬೇಕು ಎನ್ನುವ ಜಾಗೃತಿ ಮೂಡಿಸಬೇಕು” ಎಂದು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರಿನಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ಸಮುದಾಯ ಮಳೆ ಕೋಯ್ಲು (ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌)ಗೂ ಬಹಳಷ್ಟು ಒಲವು ವ್ಯಕ್ತವಾಗಿದೆ. ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ ಅಳವಡಿಸುವ 74 ಪ್ರಸ್ತಾವನೆಗಳ ಬಗ್ಗೆ ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯದಲ್ಲೇ ಮೊದಲ ಯೋಜನೆಗೆ ಚಾಲನೆ ದೊರೆಯಲಿದೆ” ಎಂದಿದ್ದಾರೆ.

“ಕಡಿಮೆ ಸಮಯದಲ್ಲಿ 986 ಇಂಗುಗುಂಡಿಗಳನ್ನು ನಿರ್ಮಿಸಲಾಗಿದ್ದು, ಇನ್ನೂ ಹೆಚ್ಚಿನ ಕಡೆಗಳಲ್ಲಿ ನಿರ್ಮಿಸುವ ಮೂಲಕ ಮಳೆ ನೀರು ನಮ್ಮ ಅಂತರ್ಜಲವನ್ನು ಸಮೃದ್ದಗೊಳಿಸಲು ಅನುವು ಮಾಡಿಕೊಡುವುದು. ಸಾರ್ವಜನಿಕರು ತಮ್ಮ ಕಟ್ಟಡಗಳಲ್ಲಿ ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವ ಮೂಲಕ ಭವಿಷ್ಯದ ಸಮೃದ್ಧ ಬೆಂಗಳೂರಿಗೆ ಕೊಡುಗೆ ನೀಡುವಂತೆ ಮನವೊಲಿಸುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ

ನಗರದಲ್ಲಿ ಜಲಮಂಡಳಿಯ ಅಧೀನದಲ್ಲಿರುವ ಬತ್ತಿ ಹೋಗಿರುವ ಕೊಳವೆ ಬಾವಿಗಳಲ್ಲಿ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದರು.

ಈ ನಿಟ್ಟಿನಲ್ಲಿ ಕಾರ್ಯತತ್ಪರರಾದ ಜಲಮಂಡಳಿ ಅಧಿಕಾರಿಗಳೂ ಒಂದು ತಿಂಗಳ ಅವಧಿಯಲ್ಲಿ 986 ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ. ವಲಯವಾರು ನಿರ್ಮಿಸಲಾಗುವ ಇಂಗುಗುಂಡಿಗಳ ಮೂಲಕ ಮಳೆಯ ನೀರು ಯಾವುದೇ ಕಲ್ಮಶವಿಲ್ಲದೇ ನೆಲದಡಿಗೆ ಇಳಿಯುವಂತೆ. ಹಾಗೆಯೇ, ರಸ್ತೆಗಳಲ್ಲಿನ ನೀರು ಹರಿದು ಒಳಚರಂಡಿಗೆ ಸೇರ್ಪಡೆ ಆಗಿ ತೊಂದರೆ ಆಗದಂತೆ ತಡೆಯಲು ಇದು ಸಹಕಾರಿಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...