ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್‌ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ, ಮೀಟರ್ ಬಡ್ಡಿ ದಂಧೆಯಲ್ಲಿ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಉಮೇಶ್, ಸುರೇಶ್ ಹಾಗೂ ಮಂಜುನಾಥ್​ ಬಂಧಿತ ಆರೋಪಿಗಳು. ಈ ಬಗ್ಗೆ ಆರ್​ಆರ್​ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಂಗನಾಥ್ ಎಂಬುವವರು ಟ್ರಾವೆಲ್ಸ್‌ ವ್ಯವಹಾರಕ್ಕಾಗಿ ಆರೋಪಿ ಮಂಜುನಾಥ್ ಎಂಬುವವರ ಬಳಿ ₹23 ಲಕ್ಷ ಹಣವನ್ನು ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ರಂಗನಾಥ್ ಅವರು ಪಡೆದ ₹23 ಲಕ್ಷ ಹಣವನ್ನ ಬಡ್ಡಿ ಸಮೇತ ಆರೋಪಿ ಮಂಜುನಾಥ್‌ಗೆ ಹಿಂದಿರುಗಿಸಿದ್ದರು.

ಆದರೆ, ಆರೋಪಿ ಮಂಜುನಾಥ್, “ಮೀಟರ್ ಬಡ್ಡಿಗೆ ಹಣ ನೀಡಿದ್ದೇನೆ. ಇನ್ನು ₹5 ಲಕ್ಷ ಹಣ ಕೊಡಬೇಕು” ಎಂದು ಪಟ್ಟು ಹಿಡಿದಿದ್ದನು. ರಂಗನಾಥ್‌ ಹಣ ನೀಡಲು ನಿರಾಕರಿಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

ಆರೋಪಿ ಮಂಜುನಾಥ್ ಈ ಸಾಲದ ಹಣವನ್ನು ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್​ಗೆ ಹೇಳಿದ್ದನು. ಉಮೇಶ್ ತನ್ನ ಸಹಚರನಾದ ಸುರೇಶ್ ಜತೆಗೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದನು. ರೌಡಿಶೀಟರ್ ಉಮೇಶ್ ಹಾಗೂ ಸುರೇಶ್ ರಂಗನಾಥ್​​ಗೆ ಹಣ ಕೊಡುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಹೊಸಕೆರೆಹಳ್ಳಿ ಉಮೇಶ್​ ರಂಗನಾಥನಿಗೆ ಅವಾಜ್ ಹಾಕಿರುವ ಆಡಿಯೋ ವೈರಲ್ ಆಗಿದೆ.

ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಉಮೇಶ್, ಸುರೇಶ್ ಹಾಗೂ ಮಂಜುನಾಥ್​​ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಆರೋಪಿಗಳ ವಿರುದ್ಧ ಆರ್​ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...