ಕಳೆದ ಎರಡ್ಮೂರು ತಿಂಗಳಿನಿಂದ ಬೆಂಗಳೂರಿನ ‘ನಮ್ಮ ಮೆಟ್ರೋ’ ಹಲವಾರು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಇದೀಗ, ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ ಪಟ್ಟಣಗೆರೆ ನಿಲ್ದಾಣದ ನಡುವಿನ ಮೆಟ್ರೋ ಹಳಿಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿರುವುದು ಕಾಣಿಸಿದ್ದು, ಪರಿಣಾಮ 27 ನಿಮಿಷಗಳ ಕಾಲ ಮೆಟ್ರೋ ಸಂಚಾರ ಬಂದ್ ಮಾಡಲಾಗಿತ್ತು.
ಯುವಕನ ಹುಚ್ಚಾಟಕ್ಕೆ ಮೆಟ್ರೋ ಸೇವೆ 27 ನಿಮಿಷ ಸ್ಥಗಿತಗೊಂಡಿದೆ. ಜ್ಞಾನಭಾರತಿ ಸ್ಟೇಷನ್ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಹಳಿ ಮೇಲೆ ಯುವಕನ ಓಡಾಟ ಗಮನಿಸಿದ ಅಧಿಕಾರಿಗಳು ತಕ್ಷಣ ಹಳಿಗಳ ಪವರ್ ಆಫ್ ಮಾಡಿದ್ದು ಮದ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ಬಳಿಕ ಯುವಕನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ, ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.