ಮಂಗಳವಾರ ತಡರಾತ್ರಿ ಮಾಗಡಿ ರಸ್ತೆಯ ಹೆಗ್ಗನಹಳ್ಳಿಯ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ಮಿನಿ ಗೂಡ್ಸ್ ವಾಹನಕ್ಕೆ ಟ್ರಿಪಲ್ ಸವಾರಿ ಮಾಡುತ್ತಿದ್ದ ಮೋಟಾರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಮೃತರು ಫಾರೂಕ್ ಅಹ್ಮದ್ ಮತ್ತು ಅಬ್ರಾರ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಬ್ಬರೂ 18 ವರ್ಷ ವಯಸ್ಸಿನವರು. ಅವರ ಸ್ನೇಹಿತ ಪಿಲಿಯನ್ ಸಿದ್ದಿಕ್ ಪಾಷಾ (19) ಅವರ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಎರಡೂ ವಾಹನಗಳು ಡಿಕ್ಕಿ ಹೊಡೆದಾಗ ಅತಿವೇಗದಲ್ಲಿ ಚಲಿಸುತ್ತಿದ್ದವು. ಸಾವನ್ನಪ್ಪಿದವರು ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದರು. ಮಿನಿ ಗೂಡ್ಸ್ ವಾಹನದ ಚಾಲಕ ತಲೆಮರೆಸಿಕೊಂಡಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 10.45ರ ಸುಮಾರಿಗೆ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ಮೂವರೂ ವೇಗವಾಗಿ ಹೋಗುತ್ತಿದ್ದಾಗ ಪೀಣ್ಯ 2ನೇ ಹಂತದಿಂದ ಬರುತ್ತಿದ್ದ ಟಾಟಾ ಏಸ್ ಶಿಕ್ಷಣ ಸಂಸ್ಥೆಯೊಂದರ ಮುಂದೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ ತಿಂಗಳ ನೀರಿನ ಸಮರ್ಪಕ ಪೂರೈಕೆಗೆ ಸಜ್ಜಾಗುತ್ತಿರುವ ಜಲಮಂಡಳಿ
ಮೂವರಿಗೆ ತೀವ್ರ ಗಾಯಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಚಾಲಕನನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.