ಬೆಂಗಳೂರು | ಮಿನಿ ಟ್ರಕ್‌ – ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

Date:

ಮಂಗಳವಾರ ತಡರಾತ್ರಿ ಮಾಗಡಿ ರಸ್ತೆಯ ಹೆಗ್ಗನಹಳ್ಳಿಯ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ಮಿನಿ ಗೂಡ್ಸ್ ವಾಹನಕ್ಕೆ ಟ್ರಿಪಲ್ ಸವಾರಿ ಮಾಡುತ್ತಿದ್ದ ಮೋಟಾರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

- Advertisement -

ಮೃತರು ಫಾರೂಕ್ ಅಹ್ಮದ್ ಮತ್ತು ಅಬ್ರಾರ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಬ್ಬರೂ 18 ವರ್ಷ ವಯಸ್ಸಿನವರು. ಅವರ ಸ್ನೇಹಿತ ಪಿಲಿಯನ್ ಸಿದ್ದಿಕ್ ಪಾಷಾ (19) ಅವರ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎರಡೂ ವಾಹನಗಳು ಡಿಕ್ಕಿ ಹೊಡೆದಾಗ ಅತಿವೇಗದಲ್ಲಿ ಚಲಿಸುತ್ತಿದ್ದವು. ಸಾವನ್ನಪ್ಪಿದವರು ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದರು. ಮಿನಿ ಗೂಡ್ಸ್ ವಾಹನದ ಚಾಲಕ ತಲೆಮರೆಸಿಕೊಂಡಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 10.45ರ ಸುಮಾರಿಗೆ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿ ಮೂವರೂ ವೇಗವಾಗಿ ಹೋಗುತ್ತಿದ್ದಾಗ ಪೀಣ್ಯ 2ನೇ ಹಂತದಿಂದ ಬರುತ್ತಿದ್ದ ಟಾಟಾ ಏಸ್ ಶಿಕ್ಷಣ ಸಂಸ್ಥೆಯೊಂದರ ಮುಂದೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ ತಿಂಗಳ ನೀರಿನ ಸಮರ್ಪಕ ಪೂರೈಕೆಗೆ ಸಜ್ಜಾಗುತ್ತಿರುವ ಜಲಮಂಡಳಿ

ಮೂವರಿಗೆ ತೀವ್ರ ಗಾಯಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಚಾಲಕನನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....