ಬೆಂಗಳೂರು | ಕಾಲೇಜು ಯುವತಿಯೊಂದಿಗೆ ಅನುಚಿತ ವರ್ತನೆ: ಪ್ರಕರಣ ದಾಖಲು

Date:

ಬೆಂಗಳೂರಿನ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ನಿಲ್ದಾಣವನ್ನು ಸಂಪರ್ಕಿಸುವ ಸ್ಕೈವಾಕ್‌ನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.

- Advertisement -

ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸದ್ಯ ಈ ವ್ಯಕ್ತಿಯನ್ನು ಬೆಂಗಳೂರು ಮೆಟ್ರೋ ಭದ್ರತಾ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೆಟ್ರೋ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿದ್ಯಾರ್ಥಿನಿಯು ಎಫ್ಐಆರ್ ದಾಖಲಿಸಲು ಮುಂದಾಗದ ಕಾರಣ ಪೊಲೀಸರು ವ್ಯಕ್ತಿಗೆ ಎಚ್ಚರಿಕೆ ನೀಡಿ ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

“ಗುರುವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಿದ್ಯಾರ್ಥಿನಿ ಹಳೆಯ ಮದ್ರಾಸ್ ರಸ್ತೆಯನ್ನು ದಾಟಲು ಫುಟ್ ಓವರ್ ಬ್ರಿಡ್ಜ್‌ನಲ್ಲಿ ನಡೆದು ಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿ ಮೆಟ್ರೋದಲ್ಲಿ ಪ್ರಯಾಣಿಸಿರಲಿಲ್ಲ. ಆದರೆ, ಕೇವಲ ರಸ್ತೆ ದಾಟಲು ಸ್ಕೈವಾಕ್ ಬಳಸುತ್ತಿದ್ದಳು. ಈ ವೇಳೆ, ಎಸ್ಕೆಲೇಟರ್ ಬಳಿ ಬಂದಾಗ ಎದುರು ದಿಕ್ಕಿನಲ್ಲಿ ಬಂದ ವ್ಯಕ್ತಿ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿನಿ ಜತೆಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ, ವಿದ್ಯಾರ್ಥಿನಿಯನ್ನು ಹಿಂಬಾಲಿಸಲು ಪ್ರಾರಂಭಿಸಿದ್ದಾನೆ” ಎಂದು ಮೂಲಗಳು ತಿಳಿಸಿವೆ.

ನಂತರ, ವಿದ್ಯಾರ್ಥಿನಿ ಮೆಟ್ರೋ ಪ್ರವೇಶ ದ್ವಾರದ ಬಳಿ ಮೆಟ್ರೋ ಭದ್ರತಾ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ, ಮೆಟ್ರೋ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿ ಈ ಬಗ್ಗೆ ದೂರು ದಾಖಲಿಸಿದ್ದಾಳೆ. ಆದರೆ, ಎಫ್ಐಆರ್ ದಾಖಲಿಸಲು ವಿದ್ಯಾರ್ಥಿನಿ ಮುಂದಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

“ವಿದ್ಯಾರ್ಥಿಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿ ಭಿಕ್ಷುಕ ಹಾಗೂ ಪಾನಮತ್ತನಾಗಿದ್ದನು. ಉದ್ದೇಶಪೂರ್ವಕವಾಗಿಯೇ ಯುವತಿಯ ಬಳಿ ಹೋಗಿ, ಆಕೆಯ ಮೇಲೆ ಬೀಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿ ಹಿಂಬಾಲಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾಳೆ. ತನ್ನಷ್ಟಕ್ಕೆ ತಾನು ನಡೆಯುತ್ತಿರುವುದಾಗಿ ಆತ ಹೇಳಿದ್ದಾನೆ. ಬಳಿಕ, ವಿದ್ಯಾರ್ಥಿನಿ ಮೆಟ್ರೋ ಭದ್ರತಾ ಸಿಬ್ಬಂದಿ ಸಹಾಯ ಪಡೆದು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಯುವತಿಯ ಹೇಳಿಕೆಯಂತೆ ಆತನ ವಿರುದ್ದ ಪ್ರಕರಣ ದಾಖಲಿಸಲಾಗಿದೆ” ಎಂದು ರಾಮಮೂರ್ತಿನಗರ ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಸ್ಕರಿಸಿದ ನೀರು ಬಳಸುವ ಗ್ರಾಹಕರಿಗೆ ರಿಯಾಯಿತಿ: ಜಲಮಂಡಳಿ ಚಿಂತನೆ

“ವ್ಯಕ್ತಿಯ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ. ವಿಚಾರಣೆ ವೇಳೆ ಆತ ಪದೇಪದೆ ತನ್ನ ಹೆಸರನ್ನು ಬದಲು ಮಾಡುತ್ತಿದ್ದನು. ಆತ ಖಚಿತವಾಗಿ ತನ್ನ ಹೆಸರು ಹೇಳದ ಕಾರಣ ಅನಾಧೇಯ ಹೆಸರಿನಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಿಕ್ಷೆ ಬೇಡಿದ ಹಣದಲ್ಲಿ ಕುಡಿಯುತ್ತೇನೆ. ರಾತ್ರಿ ವೇಳೆ ಟಿನ್ ಫ್ಯಾಕ್ಟರಿಯಲ್ಲಿರುವ ದರ್ಗಾದ ಫುಟ್ ಪಾತ್ ಮೇಲೆ ಮಲಗುತ್ತೇನೆ ಎಂದು ಆತ ಹೇಳಿದ್ದನು. ಆತನಿಗೆ ಎಚ್ಚರಿಕೆ ನೀಡಿ, ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...