ಬೆಂಗಳೂರು | ರಸ್ತೆ ಬದಿ ವ್ಯಾಪಾರಿ ಬಳಿ ಹಣ, ಸರ ದೋಚಿದ ಕಿಡಿಗೇಡಿಗಳು: ಇಬ್ಬರ ಬಂಧನ

Date:

Advertisements

ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದವನ ಬಳಿ ಇದ್ದ ರೋಲ್ಡ್‌ಗೋಲ್ಡ್‌ ಸರ ಹಾಗೂ ನಗದು ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೂರುಲ್ಲಾ ಎಂಬಾತನಿಂದ ಸರ ಹಾಗೂ ನಗದು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಚಾಮುಂಡಿ ನಗರ ನಿವಾಸಿಗಳಾದ ವಿಜಯ್ ಮತ್ತು ಸೆಂಥಿಲ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಭಾರತ ಮೂಲದ ವ್ಯಾಪಾರಿ ನೂರುಲ್ಲಾ ರಸ್ತೆ ಬದಿಯಲ್ಲಿ ಬ್ಯಾಗ್ ಮಾರಾಟ ಮಾಡುತ್ತಿದ್ದನು. ಎಂದಿನಂತೆ, ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿ ಬ್ಯಾಗ್ ಮಾರಾಟ ಮಾಡುತ್ತಿದ್ದನು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಇನ್ನು ಮುಂದೆ ತಪ್ಪು ಮಾಡುವುದಿಲ್ಲ’ ಎಂದು ಹೇಳಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಈ ವೇಳೆ, ಆಟೋದಲ್ಲಿ ಬಂದ ಆರೋಪಿಗಳು ನೂರುಲ್ಲಾ ಮೇಲೆ ಹಲ್ಲೆ ಮಾಡಿ, ಆತನ ಕುತ್ತಿಗೆಯಲ್ಲಿದ್ದ ರೋಲ್ಡ್‌ಗೋಲ್ಡ್ ಸರ, ಬೆಳ್ಳಿಯ ಸರ ಹಾಗೂ ₹500 ನಗದು ಹಣವನ್ನು ಕಿತ್ತುಕೊಂಡು ಆಟೋದಲ್ಲಿ ಪರಾರಿಯಾಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕೂಡಲೇ, ಸ್ವಲ್ಪ ದೂರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಗಡಿ ರಸ್ತೆ ಸಂಚಾರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಆಟೋವನ್ನು ತಡೆ ಹಿಡಿದಿದ್ದರು.

ಆರೋಪಿ ವಿಜಯ್ ತನ್ನ ಬಳಿಯಿದ್ದ ಸರ ಹಾಗೂ ಹಣವನ್ನು ಸೆಂಥಿಲ್‌ಗೆ ನೀಡಿ ಪರಾರಿಯಾಗುವಂತೆ ಹೇಳಿದ್ದನು. ಅದರಂತೆ ಸೆಂಥಿಲ್ ತಪ್ಪಿಸಿಕೊಳ್ಳಲು ಮುಂದಾಗಿದ್ದನು. ಓಡಿ ಹೋಗುತ್ತಿದ್ದ ಸೆಂಥಿಲ್‌ನನ್ನು ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ, ಆರೋಪಿ ವಿಜಯ್‌ ವಿರುದ್ಧ ನಗರದ ನಾನಾ ಪೊಲೀಸ್‌ ಠಾಣೆಗಳಲ್ಲಿ ಕಳವು, ಹಲ್ಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಆತನ ಮೇಲೆ ರೌಡಿಶೀಟ್​ ತೆರೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X