ಬೆಂಗಳೂರು | ಐದು ತಿಂಗಳಲ್ಲಿ 2,000ಕ್ಕೂ ಹೆಚ್ಚು ರಸ್ತೆ ಅಪಘಾತಗಳು; ವರದಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷದ ಜನವರಿಯಿಂದ ಮೇ ವೇಳೆಗೆ (5 ತಿಂಗಳು) 2,000ಕ್ಕೂ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರ್ಷ ದಾಖಲೆ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸಿವೆ ಎಂದು ಹೇಳಲಾಗಿದೆ.

ದ್ವಿಚಕ್ರ ವಾಹನ ಸವಾರರೇ ಹೆಚ್ಚಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಕೂಡ ಕಂಡುಬಂದಿದೆ ಎಂದು ಅಂಕಿಅಂಶಗಳು ಹೇಳುತ್ತಿವೆ.

ಸಂಭವಿಸಿರುವ ಅಪಘಾತಗಳ ಪೈಕಿ 368 ಮಾರಣಾಂತಿಕ ಮತ್ತು 1,672 ಮಾರಣಾಂತಿಕ ಅಲ್ಲದವುಗಳಾಗಿವೆ. ಅಲ್ಲದೇ, 376 ಸಾವು ಸಂಭವಿಸಿದ್ದು, 1,736 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಂಕಿಅಂಶಗಳು ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು ಟ್ರಾಫಿಕ್ ಪೋಲೀಸರ ಅಂಕಿಅಂಶಗಳ ಪ್ರಕಾರ, 2024ರಲ್ಲಿ 39,10,980 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಸಂಚಾರ ನಿಯಮ ಪಾಲನೆ ಮಾಡದೇ ಇರುವುದು, ಅತಿ ವೇಗದ ವಾಹನ ಚಾಲನೆ ಮಾಡುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಜತೆಗೆ, ಕುಡಿದು ವಾಹನ ಚಾಲನೆ ಮಾಡುವ ಪ್ರಕರಣಗಳು 5,433 ದಾಖಲಾಗಿವೆ. ಉಳಿದಂತೆ ಪರವಾನಗಿ ಇಲ್ಲದೆ ಚಾಲನೆ (2,710 ಪ್ರಕರಣಗಳು), ದೋಷಯುಕ್ತ ನಂಬರ್​ ಪ್ಲೇಟ್ (87,277 ಪ್ರಕರಣಗಳು), ಮತ್ತು ಟ್ರಾಫಿಕ್ ಸಿಗ್ನಲ್‌ ಜಂಪ್ (2,46,284 ಪ್ರಕರಣಗಳು) ಕೂಡ ಸೇರಿವೆ.

ಸದ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಲ್ಮಟ್ ರಹಿತ ಚಾಲನೆ ಬಹುದೊಡ್ಡ ಸಮಸ್ಯೆಯಾಗಿ ಉಳಿದಿದೆ. 16 ಲಕ್ಷಕ್ಕೂ ಹೆಚ್ಚು ಸವಾರರು ಮತ್ತು 10 ಲಕ್ಷ ಹಿಂಬದಿ ಸವಾರರು ಹೆಲ್ಮೆಟ್ ಇಲ್ಲದ ಸಿಕ್ಕಿ ಬಿದ್ದಿದ್ದಾರೆ. ಸೀಟು ಬೆಲ್ಟ್ ಧರಿಸದೇ ಸಂಚಾರ ಮಾಡಿದ 1,83,321 ಪ್ರಕರಣಗಳು ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 48,947 ಪ್ರಕರಣಗಳು ವರದಿಯಾಗಿವೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಕೊನೆಯಾಗಲಿ: ಆಮ್ ಆದ್ಮಿ ಪಾರ್ಟಿ ಆಗ್ರಹ

ದ್ವಿಚಕ್ರ ವಾಹನಗಳು ನಿಯಮ ಉಲ್ಲಂಘನೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 33 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಟೆಂಪೋಗಳು, ಲಘು ಮೋಟಾರು ವಾಹನಗಳು, ಆಟೋರಿಕ್ಷಾಗಳು, ಸರಕು ವಾಹನಗಳು ಮತ್ತು ಬಸ್‌ಗಳು ನಿಯಮ ಉಲ್ಲಂಘನೆಯಲ್ಲಿ ನಂತರದ ಸ್ಥಾನದಲ್ಲಿವೆ. ಕುಡಿದು ವಾಹನ ಚಾಲನೆ ಮಾಡುವುದರ ವಿರುದ್ಧ ಕಟ್ಟು ನಿಟ್ಟಾದ ಜಾರಿ ಮತ್ತು ಜಾಗೃತಿ ಅಭಿಯಾನಗಳ ತುರ್ತು ಅಗತ್ಯ ಒತ್ತಿಹೇಳುತ್ತದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಗಾರು ಅಧಿವೇಶನ | ವಾಲ್ಮೀಕಿ ನಿಗಮ ಅಕ್ರಮ ಬಗ್ಗೆ ಚರ್ಚೆ; ಪ್ರತಿಪಕ್ಷ ನಾಯಕರ ಆರೋಪಕ್ಕೆ ಸಿಎಂ ತಿರುಗೇಟು

ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು...

ಶಿವಮೊಗ್ಗ | ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕುವೆಂಪು ವಿವಿ ಅತಿಥಿ ಉಪನ್ಯಾಸಕರಿಂದ ಧರಣಿ

ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರುಗಳು...

ಕನ್ನಡಿಗರಿಗೆ ಉದ್ಯೋಗ | ಕಾರ್ಪೊರೇಟ್ ಲಾಬಿಗೆ ಮಣಿದ ಸರ್ಕಾರ: ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆರೋಪ

"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ...

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ...