ಬೆಂಗಳೂರು | ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರ ಪೈಕಿ ಹೆಚ್ಚು ಪುರುಷರೇ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.

ಮೃತಪಟ್ಟವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಮತ್ತು ಕೆಲಸ ಮಾಡುವ ವಯಸ್ಸಿನವರಾಗಿದ್ದಾರೆ. ಅಲ್ಲದೇ, ಹೆಲ್ಮೆಟ್ ಧರಿಸದಿರುವುದು ಮತ್ತು ಅತಿವೇಗದ ಚಾಲನೆಯೇ ಈ ಅಪಘಾತಗಳಿಗೆ ಕಾರಣ ಎಂದು ಟ್ರಾಫಿಕ್ ಪೊಲೀಸರು ಹೇಳಿದ್ದಾರೆ.

ದಿನದಿಂದ ದಿನಕ್ಕೆ ನಗರದ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ, ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

Advertisements

ಬೆಂಗಳೂರು ನಗರದಲ್ಲಿ 2023ರಲ್ಲಿ ಒಟ್ಟು 883 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. 913 ಜನ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. 2022ಕ್ಕಿಂತ 2023ರಲ್ಲಿ ಅಪಘಾತ ಶೇ.17 ರಿಂದ ಶೇ.18 ರಷ್ಟು ಹೆಚ್ಚಾಗಿದೆ. 2022ರಲ್ಲಿ ರಸ್ತೆ ಅಪಘಾತದಲ್ಲಿ 770 ಪುರುಷರು ಮೃತಪಟ್ಟಿದ್ದರು. ಈ ಸಾವುಗಳಲ್ಲಿ 50% ಕ್ಕಿಂತ ಹೆಚ್ಚು 393 ಜನ 21-40 ನಡುವಿನ ವಯಸ್ಸಿನ ಪುರುಷರಾಗಿದ್ದಾರೆ.

ಕಳೆದ ವರ್ಷ 31-40 ವಯಸ್ಸಿನ 165 ಪುರುಷರು (ಶೇ.34) ಮೃತಪಟ್ಟಿದ್ದಾರೆ. 2022 ರಲ್ಲಿ ಒಟ್ಟು 123 ಪುರುಷರು ಮೃತಪಟ್ಟಿದ್ದರು. 2023ರಲ್ಲಿ ಈ ಸಾವುಗಳ ಸಂಖ್ಯೆ 165ಕ್ಕೆ ಏರಿದೆ.

ಕಳೆದ ವರ್ಷ ಒಂದೇ ವಯೋಮಾನದ ಪುರುಷರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. 21-30 ವರ್ಷ ವಯಸ್ಸಿನ 140 ಪುರುಷರು ಮಾರಣಾಂತಿಕ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. 88 ಸ್ವಯಂಕೃತ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

2023 ರಲ್ಲಿ 21-30 ವರ್ಷ ವಯಸ್ಸಿನ 228 ಜನ ಪುರುಷರು ಮೃತಪಟ್ಟಿದ್ದರೇ, 2022ರಲ್ಲಿ 219 ಜನ ಪುರುಷರು ಸಾವಿಗೀಡಾಗಿದ್ದರು. 2023ರಲ್ಲಿ 11-20 ವರ್ಷ ವಯಸ್ಸಿನ 41 ಹುಡುಗರು ಮೃತಪಟ್ಟಿದ್ದಾರೆ. 2022ರಲ್ಲಿ 26 ಹುಡುಗರು ಮೃತಪಟ್ಟಿದ್ದರು.

2022ರಲ್ಲಿ 11-20 ವರ್ಷ ವಯಸ್ಸಿನ 26 ಹುಡುಗರು ಸಾವನ್ನಪ್ಪಿದ್ದರು. 2023ರಲ್ಲಿ ಈ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಅಂದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ, ಈ ವರ್ಷ ಸಾವಿನ ಸಂಖ್ಯೆಯಲ್ಲಿ 57.6% ರಷ್ಟು ಏರಿಕೆಯಾಗಿದೆ. ಇದು ಸ್ವಯಂ ಅಪಘಾತಗಳನ್ನು ಒಳಗೊಂಡಿಲ್ಲ.

ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಬಳಕೆದಾರರು ಅತ್ಯಂತ ದುರ್ಬಲ ರಸ್ತೆಗಳನ್ನು ಬಳಕೆ ಮಾಡುವಂತಾಗಿದೆ. ಡೆಲಿವೇರಿ ಬಾಯ್ಸ್‌ ತಮ್ಮ ಹೆಚ್ಚಿನ ಸಮಯವನ್ನು ಪ್ರಯಾಣ ಮಾಡುವುದರಲ್ಲಿಯೇ ಕಳೆಯುತ್ತಾರೆ. ಇದಿರಂದ ಅಪಘಾತಗಳು ಸಂಭವಿಸುವ ಹೆಚ್ಚಿನ ಅಪಾಯವಿದೆ.

“ಈಗ ಸಂಭವಿಸಿರುವ ಹೆಚ್ಚಿನ ಅಪಘಾತಗಳಲ್ಲಿ ಹೆಲ್ಮೆಟ್‌ಗಳು ಮತ್ತು ಸೀಟ್ ಬೆಲ್ಟ್‌ಗಳನ್ನು ಬಳಸದೇ ಇರುವುದು ಪ್ರಮುಖ ಕಾರಣವಾಗಿದೆ. ಅಲ್ಲದೇ, ರಸ್ತೆ ನಿಯಮಗಳನ್ನು ಪಾಲನೆ ಮಾಡುವುದು ಅಗತ್ಯವಾಗಿದೆ” ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ; ಕರವೇ ಟಿ.ಎ.ನಾರಾಯಣಗೌಡ

“ವಾಹನಗಳ ಸಂಖ್ಯೆ ಮತ್ತು ರಸ್ತೆ ಬಳಕೆದಾರರ ಜನಸಂಖ್ಯೆ ಹೆಚ್ಚಾದಂತೆ ಸಾವುನೋವುಗಳು ಹೆಚ್ಚಾಗುವ ನಿರೀಕ್ಷೆಯಿದೆ” ಎಂದು ನಿಮ್ಹಾನ್ಸ್‌ನ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸಾರ್ವಜನಿಕ ಆರೋಗ್ಯ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಡಾ.ಗೌತಮ್ ಮೇಲೂರ್ ಸುಕುಮಾರ್ ಹೇಳಿದರು.

“ಹೆಚ್ಚು ರಸ್ತೆಗಳನ್ನು ನಿರ್ಮಾಣ ಮಾಡಿದಾಗ, ರಸ್ತೆಯ ಉದ್ದ ಹೆಚ್ಚಾದಂತೆ, ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗಳಿಗೆ ಬರುತ್ತವೆ. ಹೀಗಾಗಿ, ಅಪಘಾತದ ಅಪಾಯವನ್ನು ಹೆಚ್ಚಿಸುತ್ತದೆ” ಎಂದು ಅವರು ಹೇಳಿದರು.

ಮೂಲ: ಡೆಕ್ಕನ್ ಹೆರಾಲ್ಡ್‌

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X