ಬೆಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ದಿನೇಶ್ ಮೃತ ರೌಡಿಶೀಟರ್. ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್‌ನಲ್ಲಿ ಮಾ.27ರಂದು 3 ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಏಳು ಜನ ದುಷ್ಕರ್ಮಿಗಳು ಸೇರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್ ಕೌಂಟರ್‌ಗಳಲ್ಲಿ ಸೇವೆ
ಈ ವಿಷಯ ತಿಳಿದು ಸ್ಥಳಕ್ಕೆ ಬಾಣಸವಾಡಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೌಡಿ ಶೀಟರ್ ದಿನೇಶ್ ಹತ್ಯೆಯ ಹಿಂದಿನ ಕಾರಣ ಏನೆಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.