ಬೆಂಗಳೂರು | ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ದೂರು ದಾಖಲು

Date:

Advertisements

ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್ನಲ್ಲಿರುವ ಅತೀಕ್ ಮಸೀದಿ ಬಳಿ ಭಾನುವಾರ ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಸ್ಲಿಮರು ರಸ್ತೆಯಲ್ಲಿ ಕುಳಿತು ನಮಾಜ್‌ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಡಾಡುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತೇಜಸ್‌ ಗೌಡ ನೀಡಿದ ದೂರಿನ ಆಧಾರದ ಮೇಲೆ ಸಿದ್ದಾಪುರ ಠಾಣೆಯ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ.

“ಮುಸ್ಲಿಮರು ನಮಾಜ್ ಮಾಡಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಅಲ್ಲದೇ, ಸೋಮೇಶ್ವರ ನಗರ ಮುಖ್ಯರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಗಳಾದ ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳಿವೆ. ರಸ್ತೆಯಲ್ಲಿ ಆಂಬ್ಯುಲೆನ್ಸ್‌ಗಳು ಹೆಚ್ಚಾಗಿ ಸಂಚರಿಸುತ್ತಿರುತ್ತವೆ. ರಸ್ತೆಯಲ್ಲಿ ನಮಾಜ್ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

Advertisements

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

“ರಸ್ತೆಯಲ್ಲಿ ನಮಾಜ್ ಮಾಡಿದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ನಮಾಜ್ ಮಾಡುವುದು ಕಾನೂನು ಬಾಹಿರವಾಗಿದೆ. ಅಲ್ಲದೇ, ಅನ್ಯ ಕೋಮಿನ ಭಾವನೆಗಳನ್ನು ಪ್ರಚೋದಿಸುವಂತೆ ಧಕ್ಕೆಯುಂಟಾಗುವಂತೆ ವರ್ತಿಸಿದ್ದಾರೆ. ಹಾಗಾಗಿ, ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತೆ ರೀತಿ ಮರುಕಳಿಸದಂತೆ ನೋಡಿಕೊಳ್ಳಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಅವರಿಗೆ ತಿಳಿಸಿಕೊಡಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X