ಬೆಂಗಳೂರು | ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ದೂರು ದಾಖಲು

Date:

ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ.

- Advertisement -

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್ ಮಸೀದಿ ಬಳಿ ಭಾನುವಾರ ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಸ್ಲಿಮರು ರಸ್ತೆಯಲ್ಲಿ ಕುಳಿತು ನಮಾಜ್‌ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಡಾಡುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತೇಜಸ್‌ ಗೌಡ ನೀಡಿದ ದೂರಿನ ಆಧಾರದ ಮೇಲೆ ಸಿದ್ದಾಪುರ ಠಾಣೆಯ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಮುಸ್ಲಿಮರು ನಮಾಜ್ ಮಾಡಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಅಲ್ಲದೇ, ಸೋಮೇಶ್ವರ ನಗರ ಮುಖ್ಯರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಗಳಾದ ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳಿವೆ. ಈ ರಸ್ತೆಯಲ್ಲಿ ಆಂಬ್ಯುಲೆನ್ಸ್‌ಗಳು ಹೆಚ್ಚಾಗಿ ಸಂಚರಿಸುತ್ತಿರುತ್ತವೆ. ರಸ್ತೆಯಲ್ಲಿ ನಮಾಜ್ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

“ರಸ್ತೆಯಲ್ಲಿ ನಮಾಜ್ ಮಾಡಿದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ನಮಾಜ್ ಮಾಡುವುದು ಕಾನೂನು ಬಾಹಿರವಾಗಿದೆ. ಅಲ್ಲದೇ, ಅನ್ಯ ಕೋಮಿನ ಭಾವನೆಗಳನ್ನು ಪ್ರಚೋದಿಸುವಂತೆ ಧಕ್ಕೆಯುಂಟಾಗುವಂತೆ ವರ್ತಿಸಿದ್ದಾರೆ. ಹಾಗಾಗಿ, ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತೆ ಈ ರೀತಿ ಮರುಕಳಿಸದಂತೆ ನೋಡಿಕೊಳ್ಳಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಅವರಿಗೆ ತಿಳಿಸಿಕೊಡಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...