ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ : ಹಲವರಿಗೆ ಗಾಯ

Date:

ಬೆಂಗಳೂರಿನ ವೈಟ್ ಫೀಲ್ಡ್ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಗಾಯಗೊಂಡವರ ಪೈಕಿ ಮೂವರು ಹೋಟೆಲ್ ಸಿಬ್ಬಂದಿ ಎಂದು ವರದಿಗಳು ತಿಳಿಸಿವೆ. ಮಹಿಳೆಯೊಬ್ಬರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಸಂಪೂರ್ಣ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಿಗೂಢ ಸ್ಫೋಟದ ವೇಳೆ ಭಾರೀ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿ ಓಡಿ ಹೋಗಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ, ವೈಟ್‌ಫೀಲ್ಡ್ ಉಪ ಪೊಲೀಸ್ ಆಯುಕ್ತರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್​ಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.

ಸದ್ಯ ಎಚ್​ಎಎಲ್​ ಪೊಲೀಸರು ಸ್ಫೋಟದಲ್ಲಿ ಸಿಕ್ಕ ಐಡಿ ಕಾರ್ಡ್​ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತತ್ವಾರ : ಖಾಲಿ ಬಿಂದಿಗೆ ಹಿಡಿದು ಸರ್ಕಾರದ ವಿರುದ್ಧ ಜನರ ಆಕ್ರೋಶ

ಇತ್ತ ಸ್ಪೋಟ ನಡೆದ ರಾಮೇಶ್ವರಂ ಕೆಫೆಯತ್ತ ಎಫ್ಎಸ್​ಎಲ್ ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ಪಡೆದುಕೊಂಡಿದ್ದಾರೆ.

ರಾಮೇಶ್ವರಂ ಕೆಫೆಯು ಬೆಂಗಳೂರಿನ ಅತ್ಯಂತ ಜನಪ್ರಿಯ ಹೋಟೆಲ್‌ಗಳ ಪೈಕಿ ಒಂದಾಗಿ ಗುರುತಿಸಿಕೊಂಡಿದ್ದು, ಬಾಲಿವುಡ್‌ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳ ನೆಚ್ಚಿನ ತಾಣ ಕೂಡ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...