ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ

Date:

Advertisements

“ಬೆಂಗಳೂರಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮಾತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹೇಳಿದರು.

ಮಾರ್ಚ್‌ 19ರಂದು ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್‌ಟಿಪಿ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನ ಕೆಂಗೇರಿ ಕೆರೆಗೆ ತುಂಬಿಸಲು ಕೈಗೊಂಡಿರುವ ಕಾಮಗಾರಿಯ ಸ್ಥಳ ಪರಿಶೀಲನೆ, ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಹಳ್ಳಿಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ತುಂಬಿಸುವ ಸಲುವಾಗಿ ನಡೆಸುತ್ತಿರುವ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

“ಬೆಂಗಳೂರಿನಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆ ಆಗುತ್ತಿದೆ. ಸಮರ್ಪಕವಾದ ಮಳೆ ನೀರು ಮರುಪೂರಣ ವ್ಯವಸ್ಥೆ ಮಾಡದೇ ಇರುವ ಹಿನ್ನಲೆ, ಹೆಚ್ಚಿನ ಪ್ರಮಾಣದ ನೀರು ಒಳಚರಂಡಿಗೆ ಹರಿಯುತ್ತಿದೆ. ಇದು ಒಳಚರಂಡಿಯ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಅಲ್ಲದೇ, ಅಂತರ್ಜಲ ಮರುಪೂರಣ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಈ ಕೊರತೆಯನ್ನು ತಪ್ಪಿಸಲು ಹಾಗೂ ಭವಿಷ್ಯದ ನೀರಿನ ಅವಶ್ಯಕತೆಯನ್ನು ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಅನಗತ್ಯ ನೀರು ಪೋಲು ತಡೆಗೆ ‘ವಾಟರ್‌ ಟ್ಯಾಪ್ ಮಾಸ್ಕ್‌’ ಅಳವಡಿಕೆ ಕಡ್ಡಾಯ: ಜಲಮಂಡಳಿ ಅಧ್ಯಕ್ಷ

ಸಂಸ್ಕರಿಸಿದ ನೀರನ್ನ ಕೆರೆಗಳಿಗೆ ತುಂಬಿಸುವ ಕಾರ್ಯ ಚುರುಕು ಗೊಳಿಸಲು ಸೂಚನೆ

“ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ನಮ್ಮ ಗುರಿಯಾಗಿದೆ. ಕೆಂಗೇರಿ ಕೆರೆ, ದುಬಾಸಿ ಪಾಳ್ಯ, ಹೊಸಹಳ್ಳಿ ಕೆರೆ ಹಾಗೂ ಅಲಗೆವಡೆರಹಳ್ಳಿ ಕೆರೆಗೆ ನೀರು ತುಂಬಿಸುವಂತಹ ಕಾಮಗಾರಿಗಳನ್ನು ಚುರುಕುಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X