ಬೆಂಗಳೂರು | ಬಿಸಿಲಿನ ಮಧ್ಯೆ ಸಂಚಾರ ಪೊಲೀಸರಿಗೆ ನಿತ್ಯ ನೀರು ಕೊಡುವ ನೀರ್‌ಸಾಬ್

Date:

ಅಕಾಲಿಕ ಮಳೆಯ ಹಿನ್ನೆಲೆ, ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಆರಂಭವಾಗಿದೆ. ಇನ್ನೂ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ಒಂದು ಹನಿಯೂ ಮಳೆಯಾಗಿಲ್ಲ. ಅಲ್ಲದೇ, ಕುಡಿಯುವ ನೀರಿನ ಸಮಸ್ಯೆಯೂ ಆರಂಭವಾಗಿದೆ. ಈ ಮಟಮಟ ಬಿಸಿಲಿನ ಮಧ್ಯೆ ನಿರಂತರ ಸಂಚಾರ ದಟ್ಟಣೆ ನಿವಾರಿಸಲು ಬೆಂಗಳೂರು ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸ್ಕೂಟಿ ಮೇಲೆ ಬರುವ ಅಪರಿಚಿತ ವ್ಯಕ್ತಿಯೊಬ್ಬ ನಿತ್ಯ ನೀರಿನ ಬಾಟಲಿ ಕೊಟ್ಟು ಹೋಗುತ್ತಿರುವುದು ವರದಿಯಾಗಿದೆ.

- Advertisement -

ಹೌದು, ಬಿಸಿಲಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೋಲಿಸರಿಗೆ ಸೈಯದ್ ಮುಜೀಬ್ ಎಂಬ 60 ವರ್ಷದ ವ್ಯಕ್ತಿಯೊಬ್ಬರು ನಿತ್ಯ ಕುಡಿಯುವ ನೀರಿನ ಬಾಟಲಿಗಳನ್ನು ನೀಡುತ್ತಾರೆ. ಹೆಬ್ಬಾಳ ಸ್ಟ್ರೆಚ್‌ನಲ್ಲಿ ಟಿಆರ್‌ಎಫ್‌ಸಿ ಪೊಲೀಸರು ಪ್ರೀತಿಯಿಂದ ಇವರನ್ನು ‘ನೀರ್ ಸಾಬ್/ವಾಟರ್ ಮ್ಯಾನ್’ ಎಂದು ಕರೆಯುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೆಂಗಳೂರಿನ ಉತ್ತರ ಭಾಗದ ಡಿಸಿಪಿ(ಸಂಚಾರ) ಐಪಿಎಸ್‌ ಗೌರಿ ಅವರು ನೀರ್‌ ಸಾಬ್‌ ಅವರಿಗೆ ಸನ್ಮಾನ ಮಾಡಿದ್ದಾರೆ. ಅಲ್ಲದೇ, ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.

“ಆಕ್ಟಿವಾ ಓಡಿಸುವ ಇವರ ಹೆಸರು ನನಗೆ ಗೊತ್ತಿಲ್ಲ. ಆದರೆ, ಅವರ ಕೆಲಸ ನನಗೆ ತಿಳಿದಿದೆ. ಕರ್ತವ್ಯದಲ್ಲಿರುವ ಸಂಚಾರ ಪೊಲೀಸ್ ಸಿಬ್ಬಂದಿಗೆ ನೀರು ಕೊಡುವುದು ಇವರ ನಿತ್ಯದ ಕರ್ತವ್ಯ. ನಾನು ಅವರನ್ನು ನಿಜವಾಗಿಯೂ ವಂದಿಸುತ್ತೇನೆ” ಎಂದು ಶ್ರೀ ರಾಮ್ ಬಿಷ್ಣೋಯ್ ಅವರು ಟ್ವೀಟ್ ಮಾಡಿದ್ದರು.

“ಕಳೆದ ಒಂದೂವರೆ ವರ್ಷದಿಂದ ಮುಜೀಬ್‌ ಅವರು ಸಂಚಾರ ಪೊಲೀಸರಿಗೆ ನೀರು ತಂದು ಕೊಡುತ್ತಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ಜನರು ಯೂ ಟರ್ನ್ ತೆಗೆದುಕೊಳ್ಳುವ ಜಾಗದಲ್ಲಿ ಗ್ಯಾಪ್ ಇದೆ. ವಾಹನ ಬಳಕೆದಾರರಿಂದ ಇಂತಹ ಯೂ ಟರ್ನ್ ತಪ್ಪಿಸಲು ಒಬ್ಬ ಪೊಲೀಸ್ ಯಾವಾಗಲೂ ಅಲ್ಲಿ ಲಭ್ಯವಿರುತ್ತಾರೆ. ಆದರೆ, ಟ್ರಾಫಿಕ್ ಪೊಲೀಸರು ನೀರು ಕುಡಿಯಲು ಹೋದಾಗ ಮಾರಣಾಂತಿಕ ಅಪಘಾತ ಸಂಭವಿಸಿದೆ” ಎಂದು ಬರೆದುಕೊಂಡಿದ್ದಾರೆ.

“ಈ ವೇಳೆ, ಮುಜೀಬ್ ಅಪಘಾತದ ಪ್ರತ್ಯಕ್ಷದರ್ಶಿಯಾಗಿದ್ದರು. ಅಂದಿನಿಂದ ಅವರು ಕರ್ತವ್ಯದ ಸ್ಥಳದಲ್ಲಿ ನೀರಿನ ಬಾಟಲಿಯನ್ನು ನೀಡುವ ಮೂಲಕ ಪೊಲೀಸರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ಅಂತಹ ಅಪಘಾತಗಳನ್ನು ತಪ್ಪಿಸಬಹುದು” ಎಂದು ಹೇಳಿದ್ದಾರೆ.

ಸದ್ಯ ಅವರು ನೀರಿನ ಬಾಟಲಿಗಳನ್ನು ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

ನೀರಿನ ಬಿಕ್ಕಟ್ಟಿನಿಂದ ಬಳಲುತ್ತಿರುವ ಬೆಂಗಳೂರು, ಕಳೆದ ಐದು ವರ್ಷಗಳಲ್ಲಿ ಮಾರ್ಚ್‌ನಲ್ಲಿ ಅತ್ಯಂತ ಗರಿಷ್ಠ ತಾಪಮಾನ ಅನುಭವಿಸಿದೆ. ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಈ ತಾಪಮಾನವು ಮಾರ್ಚ್‌ನಲ್ಲಿ ಕಳೆದ ದಶಕದಲ್ಲಿ ನಗರದಲ್ಲಿ ಅನುಭವಿಸಿದ ಮೂರನೇ ಅತಿ ಹೆಚ್ಚು ತಾಪಮಾನವಾಗಿದೆ.

“ಎಲ್ ನಿನೋ ಪ್ರಭಾವದಿಂದಾಗಿ ಮಾರ್ಚ್‌ನಲ್ಲಿ ಬೆಂಗಳೂರು ಕನಿಷ್ಠ ಮಳೆಯನ್ನು ಪಡೆದಿದೆ. ಇದರ ಪರಿಣಾಮವಾಗಿ ವಿಶೇಷವಾಗಿ ಶುಷ್ಕ ವಾತಾವರಣವಿದೆ. ಶನಿವಾರ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಇದು ಕಳೆದ ಐದು ವರ್ಷಗಳಲ್ಲಿ ಮಾರ್ಚ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ” ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...