ಬೆಂಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿ; ಬಯಲಾಯ್ತು ನಕಲಿ ಕಾರ್ಡ್‌ ಜಾಲ

Date:

Advertisements

ಬೆಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿವೆ. ಬಾಂಗ್ಲಾ ಪ್ರಜೆ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುತ್ತಿರುವ ವಿಚಾರ ಗೊತ್ತಾಗಿದೆ.

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಮೇಲೆ ನಡೆದ ದಾಳಿಯಲ್ಲಿ ನಕಲಿ ಆಧಾರ್ ಕಾರ್ಡ್ ದಂಧೆ ಬಯಲಾಗಿದೆ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ತನಿಖೆಗೆ ಇಳಿದಾಗ ನಕಲಿ ಆಧಾರ್ ಕಾರ್ಡ್‌ ಜಾಲ ಪತ್ತೆಯಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ನಕಲಿ ಸರ್ಕಾರಿ ಗುರುತಿನ ಚೀಟಿಗಳನ್ನು ಸೃಷ್ಟಿಸುವ ದಂಧೆ ಕುರಿತು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ಟೋಬರ್ 19 ರಂದು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

“ನಾವು ವೇಶ್ಯಾಗೃಹದ ಮೇಲೆ ದಾಳಿ ನಡೆಸಿದ ನಂತರ, ಸಾಮಾನ್ಯವಾಗಿ ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತೇವೆ. ಈ ವೇಳೆ, ವೇಶಾವಾಟಿಕೆಯಲ್ಲಿ ತೋಡಗಿದ್ದ ಮಹಿಳೆಯರ ಆಧಾರ್ ಕಾರ್ಡ್‌ನಲ್ಲಿನ ವಿಳಾಸವು ತಪ್ಪಾಗಿದೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ತನಿಖೆಯ ನಂತರ, ಕಾರ್ಡ್‌ಗಳು ನಕಲಿ ಎಂದು ತಿಳಿದುಬಂದಿತ್ತು” ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

ನಕಲಿ ಆಧಾರ್ ಮಾಡಿಕೊಟ್ಟ ಆರೋಪಿಗಳು ಸಚಿವ ಬೈರತಿ ಸುರೇಶ್ ಆಪ್ತರು ಎನ್ನಲಾಗಿದ್ದು, ಈ ವಿಚಾರವೀಗ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ದಸರಾ ಸಂಭ್ರಮ | ಬೆಂಗಳೂರಿನ ಮಾರ್ಕೇಟ್‌ಗಳಲ್ಲಿ ಜನವೋ ಜನ

ಆರೋಪಿಗಳು ಸಚಿವರ ಆಪ್ತರಾದ ಹಿನ್ನೆಲೆ, ಸಿಸಿಬಿ ಪೊಲೀಸರು ಆಧಾರ್ ಆ್ಯಕ್ಟ್ 2016ನ್ನು ಎಫ್​ಐಆರ್​ನಲ್ಲಿ ದಾಖಲಿಸದೆ, ಕೇವಲ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಪ್ರಕರಣ ಸಮ್ಮರಿಯಲ್ಲಿ ಅಧಾರ್ ಕಾರ್ಡ್ ಕೂಡ ನಕಲಿ ಮಾಡಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X