ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟಿಸ್‌

Date:

Advertisements

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ , ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.

ದ್ವೇಷವನ್ನು ಪ್ರಚೋದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಬೇಕಿರುವುದರಿಂದ ಈ ನೊಟೀಸ್ ತಲುಪಿದ 7 ದಿನಗಳ ಒಳಗಾಗಿ ಪ್ರಕರಣದ ತನಿಖಾಧಿಕಾರಿ, ಹೈಗ್ರೌಂಡ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಅವರ ಮುಂದೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಲಾಗಿದೆ.

ಏನಿದು ಪ್ರಕರಣ?

Advertisements

ಮೇ 4ರಂದು ಸಾಯಂಕಾಲ 5.34 ಗಂಟೆಗೆ ಭಾರತೀಯ ಜನತಾ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣ @bjp4karnataka ಗೆ ಸೇರಿದಎಕ್ಸ್ಖಾತೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯಂತೆ ಬಿಜೆಪಿ ಐಟಿ ಸೆಲ್ಮುಖ್ಯಸ್ಥ ಅಮಿತ್ ಮಾಳವಿಯಾರವರುಎಚ್ಚರ..ಎಚ್ಚರ..ಎಚ್ಚರಎಂಬ ಒಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. 

ಈ ವಿಡಿಯೋ ಸಮಾಜದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡಿ, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವ ರೀತಿಯಲ್ಲಿದೆ. ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ವರ್ಗಗಳ ಮದ್ಯೆ ದ್ವೇಷ ಮತ್ತು ವೈಮನಸ್ಸನ್ನು ಸೃಷ್ಟಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ರಮೇಶ್ ಬಾಬು ಅವರು ಮೇ 5 ರಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾವ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ…” ಎಂಬ ಹೇಳಿಕೆ ಇರುವ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದಎಕ್ಸ್ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್ ಕಾರ್ತಿಕೇಯನ್ ಬರ್ಬರ ಹತ್ಯೆ

ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ‘ಮಾಳವೀಯ, ನಡ್ಡಾ ಮತ್ತು ವಿಜಯೇಂದ್ರ ಇಂತಹ ವಿಡಿಯೊ ಪ್ರಸಾರದ ಮೂಲಕ ಸಮುದಾಯಗಳ ಮಧ್ಯೆ ದ್ವೇಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು.

ಹಾಗಾಗಿ, ಜೆ.ಪಿ ನಡ್ಡಾ, ಬಿ.ವೈ ವಿಜಯೇಂದ್ರ ಮತ್ತು ಅಮಿತ್ ಮಾಳವಿಯಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರನ್ನು ಸ್ವೀಕರಿಸಲಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಮೂಲಕ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ದೂರು ನೀಡಿದ್ದು, ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮೂವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X