ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟಿಸ್‌

Date:

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ , ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.

- Advertisement -

ದ್ವೇಷವನ್ನು ಪ್ರಚೋದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಬೇಕಿರುವುದರಿಂದ ಈ ನೊಟೀಸ್ ತಲುಪಿದ 7 ದಿನಗಳ ಒಳಗಾಗಿ ಪ್ರಕರಣದ ತನಿಖಾಧಿಕಾರಿ, ಹೈಗ್ರೌಂಡ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಅವರ ಮುಂದೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಏನಿದು ಪ್ರಕರಣ?

ಮೇ 4ರಂದು ಸಾಯಂಕಾಲ 5.34 ಗಂಟೆಗೆ ಭಾರತೀಯ ಜನತಾ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣ @bjp4karnataka ಗೆ ಸೇರಿದ “ಎಕ್ಸ್” ಖಾತೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯಂತೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವಿಯಾರವರು ‘ಎಚ್ಚರ..ಎಚ್ಚರ..ಎಚ್ಚರ’ ಎಂಬ ಒಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. 

ಈ ವಿಡಿಯೋ ಸಮಾಜದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡಿ, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವ ರೀತಿಯಲ್ಲಿದೆ. ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ವರ್ಗಗಳ ಮದ್ಯೆ ದ್ವೇಷ ಮತ್ತು ವೈಮನಸ್ಸನ್ನು ಸೃಷ್ಟಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ರಮೇಶ್ ಬಾಬು ಅವರು ಮೇ 5 ರಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾವ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ…” ಎಂಬ ಹೇಳಿಕೆ ಇರುವ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‘ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್ ಕಾರ್ತಿಕೇಯನ್ ಬರ್ಬರ ಹತ್ಯೆ

ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ‘ಮಾಳವೀಯ, ನಡ್ಡಾ ಮತ್ತು ವಿಜಯೇಂದ್ರ ಇಂತಹ ವಿಡಿಯೊ ಪ್ರಸಾರದ ಮೂಲಕ ಸಮುದಾಯಗಳ ಮಧ್ಯೆ ದ್ವೇಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು.

ಹಾಗಾಗಿ, ಜೆ.ಪಿ ನಡ್ಡಾ, ಬಿ.ವೈ ವಿಜಯೇಂದ್ರ ಮತ್ತು ಅಮಿತ್ ಮಾಳವಿಯಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರನ್ನು ಸ್ವೀಕರಿಸಲಾಗಿದ್ದು, ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಈ ಮೂಲಕ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್​ ದೂರು ನೀಡಿದ್ದು, ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...