ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಮನೆಗೆ ಬರಲಿದೆ ನೋಟಿಸ್ ಜತೆಗೆ ಕ್ಯೂಆರ್‌ ಕೋಡ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಬೆಂಗಳೂರು ಸಂಚಾರ ಪೊಲೀಸರು ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

- Advertisement -

ಹೌದು, ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ಮನೆಗೆ ಇಷ್ಟು ದಿನ ಸಂಚಾರ ಪೊಲೀಸರು ತೆರಳಿ ದಂಡ ಪಾವತಿ ಮಾಡಿಸಿಕೊಳ್ಳುತ್ತಿದ್ದರು. ಇಲ್ಲವೇ ನೋಟಿಸ್‌ ನೀಡುತ್ತಿದ್ದರು. ಇನ್ನು ಮುಂದೆ ನೋಟಿಸ್ ಜತೆಗೆ ಕ್ಯೂ ಆರ್ ಕೋಡ್ ಕೂಡ ಮನೆ ಬಾಗಿಲಿಗೆ ಬರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಸಂಪರ್ಕ ರಹಿತ ನಿಯಮ ಜಾರಿಯಡಿಯಲ್ಲಿ ದಾಖಲು ಮಾಡುವ ನಿಯಮ ಉಲ್ಲಂಘನಾ ಪ್ರಕರಣಗಳಿಗೆ ಆಟೋಮೇಷನ್ ಸೆಂಟರ್ ವಿಭಾಗದಿಂದ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ, ಕಲಂ 133 ಮೋಟಾರು ವಾಹನ ಕಾಯ್ದೆ ರೀತ್ಯಾ ನೊಟೀಸ್‌ ಮುದ್ರಿಸಿ ಅಂಚೆ ಮುಖಾಂತರ ಕಳುಹಿಸಲಾಗುತ್ತಿದೆ.

ಮಾರ್ಚ್‌ 1 ರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಮಾಲೀಕರಿಗೆ ಕಳುಹಿಸುವ 133 ನೋಟೀಸ್‌ನ ಬಲಭಾಗದಲ್ಲಿ ಕ್ಯೂ ಆರ್ ಕೋಡನ್ನು ಸಹ ಮುದ್ರಿಸಿ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕ್ಯೂಆರ್ ಕೋಡ್‌ ಮುಖಾಂತರ ನಿಯಮ ಉಲ್ಲಂಘನೆಯ ವಿಧ. ಉಲ್ಲಂಘನೆಯ ಸ್ಥಳ, ದಿನಾಂಕ, ಸಮಯ, ದಂಡದ ಮೊತ್ತದ ವಿವರಗಳ ಜತೆಗೆ ಬಹು ಮುಖ್ಯವಾಗಿ ಉಲ್ಲಂಘನೆಯ ಸಾಕ್ಷ್ಯಾಧಾರಿತ ಛಾಯಾಚಿತ್ರವನ್ನೂ ಸಹಾ ನೋಡಬಹುದಾಗಿದೆ.

ಉಲ್ಲಂಘನೆಯ ದಂಡದ ಮೊತ್ತವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲು ಆದೇ ಕ್ಯೂ ಆರ್ ಕೋಡ್‌ನಲ್ಲಿ ಪಾವತಿಯ ಲಿಂಕನ್ನೂ ಸಹ ಒದಗಿಸಲಾಗಿದೆ.

“ನಿಯಮ ಉಲ್ಲಂಘನೆಗಳಿಗೆ ಸಂಬಂಧಪಟ್ಟ ಯಾವುದೇ ಬಗ್ಗೆ ದೂರು/ವಿವಾದಗಳಿದ್ದಲ್ಲಿ btp.gov.inಗೆ ಲಾಗಿನ್ ಆಗುವ ಮೂಲಕ ಅಥವಾ ಕೆಎಸ್‌ಪಿ ಆಪ್‌ ಅನ್ನು ಪ್ಲೇಸ್ಟೋರ್‌ನಿಂದ ಡೌನ್‌ ಲೋಡ್ ಮಾಡಿಕೊಂಡು, ಉಲ್ಲಂಘನೆಯ ವಿವರಗಳನ್ನು ವೀಕ್ಷಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದಂಡ ಪಾವತಿಸಬಹುದಾಗಿದೆ” ಎಂದು ಹೇಳಿದೆ.

“2021ರ ನಂತರದ ನಿಯಮ ಉಲ್ಲಂಘನೆಗಳಿಗೆ ಮಾತ್ರ ಸಾಕ್ಷ್ಯಾಧಾರಿತ ಛಾಯಾಚಿತ್ರಗಳು ಲಭ್ಯವಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...