ಬೆಂಗಳೂರು | ತೆರವು ವೇಳೆ ಜೆಸಿಬಿಗೆ ಬೆಂಕಿ ಹಚ್ಚಿದ ಒತ್ತುವರಿದಾರ

Date:

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ.

- Advertisement -

ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ಶಿವಕೋಟೆ ಗ್ರಾಮ್ ಸರ್ವೆ ನಂ 10/7&8ರಲ್ಲಿ ಬಂಡಿದಾರಿ ಒತ್ತುವರಿ ತೆರುವು ಮಾಡುವಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು. ಆರ್ ಐ ರವಿಕುಮಾರ್ ನೇತೃತ್ವದಲ್ಲಿ ಬಂಡಿದಾರಿ ತೆರವುಗೊಳಿಸುವ ಕಾರ್ಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ನಡೆಯುತ್ತಿತ್ತು. ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ಒತ್ತುವರಿದಾರ ಸಿ. ಬಚ್ಚೇಗೌಡ ಬಿನ್ ಬಿ. ಚನ್ನರಾಯಪ್ಪ ಮತ್ತು ಮಗ ಚೇತನ್ ಎಂಬುವವರು ಏಕಾಏಕಿ ಪೆಟ್ರೋಲ್ ತುಂಬಿದ ಗಾಜಿನ ಬಾಟಲ್‌ಗಳಿಗೆ ಬೆಂಕಿ ಹಚ್ಚಿ ಜೆಸಿಬಿ ಮೇಲೆ ಸರಣಿ ಬಾಟಲ್‌ಗಳನ್ನು ಎಸೆದಿದ್ದು, ಇದರಿಂದ ಬೆಂಕಿ ಹತ್ತಿಕೊಂಡಿದೆ. ಜೆಸಿಬಿ ಡ್ರೈವರ್ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಬಚ್ಚೇಗೌಡನನ್ನು ರಾಜಾನುಕುಂಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳಾದ ಬಚ್ಚೇಗೌಡ ಮತ್ತು ಚೇತನ್ ವಿರುದ್ಧ ದೂರು ದಾಖಲಾಗಿದೆ.

“ಪ್ರಸ್ತಾಪಿತ ಜಮೀನಿನಲ್ಲಿ ಕೃಷಿ ಚಟುವಟಿಕೆಗಳಿಗೆ ಓಡಾಡುವ ಜಾಗವನ್ನು ಒತ್ತುವರಿ ಮಾಡಿದ್ದು, ಒತ್ತುವರಿ ತೆರವು ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಹಾಗಾಗಿ, ಒತ್ತುವರಿದಾರರಾದ ಸಿ. ಬಚ್ಚೇಗೌಡ ಬಿನ್ ಬಿ. ಚೆನ್ನರಾಯಪ್ಪ ಮತ್ತು ಮಗ ಚೇತನ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಎಫ್.ಐ.ಆರ್ ದಾಖಲಿಸುವಂತೆ ಗ್ರಾಮಸ್ಥರು ಕೋರಿದ್ದಾರೆ. ಹಾಗಾಗಿ, ಇವರ ವಿರುದ್ಧ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಬೇಕು” ಎಂದು ಯಲಹಂಕ ತಹಶೀಲ್ದಾರರು ರಾಜಾನುಕುಂಟೆ ಪೊಲೀಸರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರಿನಲ್ಲಿ ಭೂ ಒತ್ತುವರಿದಾರನ ಬಂಧನ. ಕಂದಾಯ ಇಲಾಖೆಯಿಂದ ನಡೆಸಲಾದ ರಸ್ತೆ ಒತ್ತುವರಿ ತೆರವು ಕಾಮಗಾರಿ ತಡೆದು ಜೆಸಿಬಿಗೆ ಬೆಂಕಿ ಹಚ್ಚಿದ ಕಿಡಿಗೇಡಿ ಪೊಲೀಸರ ವಶಕ್ಕೆ. ಇಂತಹ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ನಮ್ಮ ಸಂಕಲ್ಪ ದೃಢವಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು ಟ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...