ಬೆಂಗಳೂರು | ಫೆ.11 ರಂದು ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಡುವೆ ನಮ್ಮ ಮೆಟ್ರೋ ಸಂಚಾರ ಭಾಗಶಃ ಸ್ಥಗಿತ

Date:

“ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರವರಿ 11ರಂದು ನಮ್ಮ ಮೆಟ್ರೋ ಸಂಚಾರ ಭಾಗಶಃ ಸ್ಥಗಿತವಾಗಲಿದೆ” ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, ”ಭಾನುವಾರ ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

”ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಸೇವೆಯನ್ನು ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಗ್ಗೆ 7 ಗಂಟೆಯಿಂದ ಚಲಿಸುತ್ತವೆ” ಎಂದು ಮಾಹಿತಿ ನೀಡಿದೆ.

”ಬೆಳಗ್ಗೆ 9 ಗಂಟೆಯ ನಂತರ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಕೆಐಎ | 3 ಪ್ರತ್ಯೇಕ ಪ್ರಕರಣಗಳಲ್ಲಿ ₹6.8 ಕೋಟಿ ಮೌಲ್ಯದ 9.3 ಕೆಜಿ ಚಿನ್ನ ವಶ; 6 ಮಂದಿ ಬಂಧನ

ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಯನ್ನು ಗಮನಿಸಲು ಕೋರಿದೆ. ಜತೆಗೆ ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...