ಬೆಂಗಳೂರು | ವಿಮಾನ ನಿಲ್ದಾಣದ ವಾಶ್​​ ರೂಮ್​​ನಲ್ಲಿ ಒಂದು ಕೆಜಿ ಚಿನ್ನ ಪತ್ತೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹80 ಲಕ್ಷ ಮೌಲ್ಯದ ಒಂದು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಅ.24 ರಂದು ಬೆಂಗಳೂರಿನ ಅಬುಧಾಬಿಯಿಂದ ಬೆಂಗಳೂರಿಗೆ EY 238 ವಿಮಾನ ಆಗಮಿಸಿದೆ. ವಿಮಾನ ಬಂದ ವೇಳೆ ಏರ್ ಕಸ್ಟಮ್ಸ್‌ ಅಧಿಕಾರಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ, ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಕಪ್ಪು ಪೌಚ್‌ನಲ್ಲಿ ಸುತ್ತಿದ ಚಿನ್ನದ ಪೇಸ್ಟ್ ಬಚ್ಚಿಟ್ಟಿರುವುದು ಪತ್ತೆಯಾಗಿದೆ.

ಒಟ್ಟು 1331.66 ಗ್ರಾಂ ತೂಕದ ₹80,21,920 ಮೌಲ್ಯದ ಚಿನ್ನವನ್ನು ಕಸ್ಟ್‌ಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಣ್ಣು ಭ್ರೂಣ ಲಿಂಗ ಪತ್ತೆ; ನಾಲ್ವರ ಬಂಧನ

ಅ.22 ರಂದು ಕೌಲಾಲಂಪುರ್, ದುಬೈ ಮತ್ತು ಕೊಲಂಬೊದಿಂದ ಆಗಮಿಸಿದ 4 ಜನರನ್ನು ಬೆಂಗಳೂರು ಏರ್ ಕಸ್ಟಮ್ಸ್‌ ಅಧಿಕಾರಿಗಳು ತಡೆಹಿಡಿದು ಅವರಿಂದ ಸುಮಾರು ₹1.76 ಕೋಟಿ ಬೆಲೆಬಾಳುವ 3ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಜತೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X