ಬೆಂಗಳೂರು | ಲುಲುಮಾಲ್‌ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಿಡಿಯೋ ಆಧರಿಸಿ ತನಿಖೆ ನಡೆಸಿದ ಪೊಲೀಸರು ಇದೀಗ ವಯಸ್ಸಾದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಲುಲು ಮಾಲ್​ನಲ್ಲಿ ಯುವತಿಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಭ್ಯವಾಗಿ ವರ್ತಿಸಿದ್ದ ವಯಸ್ಸಾದ ವ್ಯಕ್ತಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಎಂದು ಪತ್ತೆ ಹಚ್ಚಿದ್ದು, ಅಶ್ವಥ್ ನಾರಾಯಣ್ (6೦) ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸಿ, ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದಾನೆ ಎಂದು ತಿಳಿದುಬಂದಿದೆ.

Advertisements

ಆರೋಪಿಯನ್ನು ಹುಡುಕಿಕೊಂಡು ಪೊಲೀಸರು ಮನೆಗೆ ತೆರಳಿದ್ದಾರೆ. ಆದರೆ, ಈ ವೇಳೆ, ಆತ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ. ಮಾಗಡಿ ರೋಡ್ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ಮುಂದುವರೆಸಿದ್ದಾರೆ.

ಏನಿದು ಘಟನೆ?

ಬೆಂಗಳೂರಿನ ಲುಲು ಮಾಲ್​ನಲ್ಲಿ ಅಕ್ಟೋಬರ್ 29ರಂದು ಸಾಯಂಕಾಲ ಸುಮಾರು 6:30ಕ್ಕೆ ಬೇಕಂತಲೇ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರು ಇರುವ ಕಡೆ ತೆರಳಿ ಅವರ ಹಿಂಭಾಗವನ್ನು ಸ್ಪರ್ಶಿಸಿ ಬರುತ್ತಿದ್ದನು.

ಮಾಲ್‌ನಲ್ಲಿ ಜನರು ಹೆಚ್ಚಾಗಿ ಇದ್ದ ಕಾರಣ ಈ ಘಟನೆಯನ್ನು ಯಾರೂ ಹೆಚ್ಚಾಗಿ ಗಮನಿಸಿಲ್ಲ. ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಇದನ್ನು ಕಂಡು, ಈ ವಯಸ್ಸಾದ ವ್ಯಕ್ತಿಯನ್ನು ಹಿಂಬಾಲಿಸಿದ್ದಾರೆ. ಈ ವೇಳೆ, ವಯಸ್ಸಾದ ವ್ಯಕ್ತಿ ಯುವತಿಯೊಬ್ಬರ ಹಿಂದೆ ತೆರಳಿ ಆಕೆಯ ಹಿಂಬದಿಯನ್ನು ಸ್ಪರ್ಶಿಸಿದ್ದಾನೆ. ಯುವತಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಯುವತಿಯ ಹಿಂಬದಿ ತೆರಳಿ ಆಕೆಯನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಯಶವಂತ ತೊಗಟವೀರ ಎಂಬುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದರು. ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ, ಲುಲು ಮಾಲ್​ ಅಧಿಕಾರಿಯೊಬ್ಬರು ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ ತೋರಿದ ವ್ಯಕ್ತಿ ವಿರುದ್ಧ ದೂರು ದಾಖಲು

ಈ ದೂರಿನ ಆಧಾರದ ಮೇಲೆ ಪೊಲೀಸರು, ಕಾರ್ಯಚರಣೆ ನಡೆಸಿ ಆರೋಪಿಯ ಗುರುತು ಪತ್ತೆ ಮಾಡಿದ್ದಾರೆ. ಆದರೆ, ಆತ ಪರಾರಿಯಾಗಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X