ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28 ವರ್ಷದ ಯುವತಿಯೊಬ್ಬರು ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಆರೋಪ ಮಾಡಿದ್ದಾರೆ.
ಮೆರಿನಾ ವಿಲ್ಸನ್ ಎಂಬ ಯುವತಿ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು
ಯುವತಿಯ ಆರೋಪವೇನು?
ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರಪ್ಪ ಅವರು ಪಾನೀಯದಲ್ಲಿ ಮತ್ತು ಬರುವ ಮದ್ದನ್ನು ಬೆರೆಸಿ ನನಗೆ ಕುಡಿಸಿದ್ದಾರೆ. ಈ ವೇಳೆ, ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಾನೀಗ 8 ತಿಂಗಳ ಗರ್ಭಿಣಿಯಾಗಿದ್ದೇನೆ. ಈಗಾಗಲೇ ಅವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಮಚಂದ್ರಪ್ಪ ಅವರು ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಇದುವರೆಗೂ ಅವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.