ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಹೆಚ್ಚಿನ ಜನರಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ

Date:

ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಗುರುವಾರ ಇನ್ನೂ ಕೆಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿರುವ ತೆಲುಗು ನಟಿ ಆಶಿ ರೈ ಅವರಿಗೂ ನೋಟಿಸ್ ಜಾರಿ ಮಾಡಲಾಗಿದೆ. ನಟಿ ಹೇಮಾ ಕೊಲ್ಲಾ ಅವರಿಗೆ ಸಿಸಿಬಿ ಎರಡನೇ ನೋಟಿಸ್ ನೀಡಿದೆ. ಹೇಮಾ ಅವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಇದಕ್ಕೂ ಮುನ್ನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ 16 ಮಂದಿಗೆ ನೋಟಿಸ್ ಜಾರಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮೇ 19 ಮತ್ತು 20ರ ಮಧ್ಯರಾತ್ರಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ರೇವ್‌ಪಾರ್ಟಿ ನಡೆದಿತ್ತು. ಈ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ ಮತ್ತು ಇತರ 85 ಮಂದಿ ಮಾದಕ ದ್ರವ್ಯ ಸೇವನೆ ಮಾಡಿದ್ದಾರೆ ಎಂದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪಾರ್ಟಿಯಲ್ಲಿ ಕನಿಷ್ಠ 101 ಜನರು ಭಾಗವಹಿಸಿದ್ದರು. ಅಲ್ಲದೇ, ಈ ಪಾರ್ಟಿಯನ್ನು ಹುಟ್ಟುಹಬ್ಬದ ಸಂಭ್ರಮಾಚರಣೆ ಎಂದು ಪ್ರಚಾರ ಮಾಡಲಾಯಿತು.

ಶಂಕಿತರು 80ಕ್ಕೂ ಹೆಚ್ಚು ಮಂದಿ ಇರುವುದರಿಂದ ಅವರನ್ನು ಬ್ಯಾಚ್‌ಗಳಲ್ಲಿ ಪ್ರಶ್ನಿಸಲು ಸಿಸಿಬಿ ಯೋಜಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬರ್ತ್‌ಡೇ ಪಾರ್ಟಿ ಎಂದು ಭಾವಿಸಿ ಕೂಟಕ್ಕೆ ಹಾಜರಾಗಿದ್ದೇನೆ. ಡ್ರಗ್ ಸೇವನೆಯ ಬಗ್ಗೆ ತಿಳಿದಿರಲಿಲ್ಲ ಎಂದು ಆಶಿ ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ. ಡ್ರಗ್ ಸೇವನೆಯ ಪರೀಕ್ಷೆಯಲ್ಲಿ ಇವರದ್ದು ನೆಗೆಟಿವ್ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾಜಿಕ ಜಾಲತಾಣ ಬಳಸದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಶಾಲೆಗಳು

ಪಾರ್ಟಿಯಲ್ಲಿ ಸಂಘಟಕರು ಮತ್ತು ಮಾದಕ ದ್ರವ್ಯ ದಂಧೆಕೋರರು ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಇದುವರೆಗೆ ಬಂಧಿಸಿದೆ.

ಹೆಬ್ಬಗೋಡಿನಲ್ಲಿರುವ ಜಿಆರ್ ಫಾರಂಹೌಸ್ ಮೇಲೆ ದಾಳಿ ನಡೆಸಿ 15.56 ಗ್ರಾಂ ಎಂಡಿಎಂಎ, 6.2 ಗ್ರಾಂ ಕೊಕೇನ್, ಆರು ಗ್ರಾಂ ಹೈಡ್ರೋಗಾಂಜಾ ಮತ್ತು ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದು, ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ಆಂಧ್ರಪ್ರದೇಶದ ಶಾಸಕ ಮತ್ತು ಸಚಿವರೊಬ್ಬರ ಸ್ಟಿಕ್ಕರ್ ಇರುವ ಕಾರು ಪತ್ತೆಯಾಗಿದೆ. ಕಾರು ಯಾರ ಮಾಲೀಕತ್ವದಲ್ಲಿದೆ ಮತ್ತು ಅವರಿಗೆ ಶಾಸಕ ಮತ್ತು ಸಚಿವರ ಸ್ಟಿಕ್ಕರ್ ಹೇಗೆ ಸಿಕ್ಕಿತು ಎಂಬ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...