ಬೆಂಗಳೂರು | ಯುವಕನ ಮೇಲೆ ಗುಂಡಿನ ದಾಳಿ ; ನಿವೃತ್ತ ಮಿಲಿಟರಿ ಅಧಿಕಾರಿ ಬಂಧನ

Date:

ಮದ್ಯಪಾನ ಸೇವಿಸಿ ವ್ಯಕ್ತಿಯೊಬ್ಬ ಪರಿಚಿತರ ಮನೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಯುವಕನ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಸೋಮವಾರ ತಡರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ. ಪರಶುರಾಮ್​ ಎಂಬಾತ ಸೂರಜ್​​ ಎಂಬ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಆರೋಪಿ ಪರಶುರಾಮ್ ಅವರನ್ನು ಗಂಗಮ್ಮನ ಗುಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಆರೋಪಿ ಪರಶುರಾಮ್ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದನು. ಈತ ತನ್ನ ಬಳಿ ಪರವಾನಗಿ ಹೊಂದಿರುವ ಗನ್​ ಇಟ್ಟುಕೊಂಡಿದ್ದಾರೆ.

ಸೋಮವಾರ ಮಧ್ಯರಾತ್ರಿ ಏಕಾಏಕಿ ಪರಿಚಿತರ ಮನೆಗೆ ತೆರಳಿ ಕುಡಿದ ಮತ್ತಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲು ಆರಂಭಿಸಿದ್ದಾರೆ. ಈ ವೇಳೆ, ಮನೆಗೆ ಪ್ರವೇಶ ಮಾಡಲು ಹೊರಟ ಆರೋಪಿಯನ್ನು ಸೂರಜ್ ತಡೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಕೋಪಗೊಂಡ ಪರಶುರಾಮ್ ತನ್ನ ಬಳಿ ಇದ್ದ ಗನ್ ತೆಗೆದು ಸೂರಜ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಗುಂಡು ಗೋಡೆಗೆ ತಾಕಿದ್ದು, ಯುವಕ ಸೂರಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

ಗುಂಡಿನ ಸದ್ದು ಕೇಳಿ ಅಕ್ಕಪಕ್ಕದ ಮನೆಯವರೆಲ್ಲ ಓಡಿ ಬಂದು, ಆರೋಪಿ ಪರಶುರಾಮ್​ನನ್ನು ಹಿಡಿದಿದ್ದಾರೆ. ಬಳಿಕ ಸೂರಜ್​ ಹಾಗೂ ಆತನ ತಂದೆ ಆರೋಪಿಯನ್ನು ಹಿಡಿದು ಅವರ ಬಳಿ ಇದ್ದ ಗನ್​ ಅನ್ನು ವಶಪಡಿಸಿಕೊಂಡು ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಗಂಗಮ್ಮನ ಗುಡಿ ಠಾಣೆಯ ಪೊಲೀಸರು ಪರಶುರಾಮ್‌ನನ್ನು ಬಂಧಿಸಿದ್ದಾರೆ. ಈ ಬಗ್ಗೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...