ಬೆಂಗಳೂರು | ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಸ್ಟಿಕ್ಕರ್ ಕಡ್ಡಾಯ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ ಪ್ರದರ್ಶಿಸಲು ಪಾಲಿಕೆ ಸೂಚನೆ ನೀಡಿದೆ.

“ಪಾಲಿಕೆ‌ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್‌ ಅಂಟಿಸಿಕೊಳ್ಳಬೇಕಿದೆ. ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್‌ಗಳನ್ನು ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಸದರಿ ಸ್ಟಿಕ್ಕರ್‌ಗಳನ್ನು ವಲಯವಾರು ಹಂಚಿಕೆ ಮಾಡಲಾಗಿದೆ” ಎಂದು ಹೇಳಿದೆ.

“ಅದರಂತೆ, ಪ್ರತಿ ಟ್ಯಾಂಕರ್ ಮಾಲೀಕರು ಪಾಲಿಕೆಯಲ್ಲಿ ಸ್ವಯಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕ್ಕರ್‌ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸ್ವಯಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದೆ.

Advertisements

“ಪಾಲಿಕೆಯಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಮಾಲೀಕರಿಗೆ ಈಗಾಗಲೇ ನಿಗದಿಪಡಿಸಿರುವ ದರದ ಅನುಸಾರ ನೀರು ಪೂರೈಕೆ‌ ಮಾಡಲು ಸೂಚಿಸಲಾಗಿದೆ. ನೋಂದಣಿಯಾಗದ ಟ್ಯಾಂಕರ್‌ಗಳಿಗೆ ನೀರು ಪೂರೈಕೆ ಮಾಡಲು ಅವಕಾಶ ನೀಡುವುದಿಲ್ಲ. ಸರ್ಕಾರದಿಂದ ನಿಗದಿಪಡಿಸಿರುವ ದರಕ್ಕಿಂದ ಹೆಚ್ಚಾಗಿ ಮಾರಾಟ ಮಾಡಿದಲ್ಲಿ ಅಥವಾ ನೀರಿನ ಗುಣಮಟ್ಟದ ಸಮಸ್ಯೆ ಉಂಟಾದಲ್ಲಿ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916ಗೆ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಗೆ ಸಂಪರ್ಕಿಸಬಹುದಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

“ಪಾಲಿಕೆ ತೆರೆದಿದ್ದ ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿಯಾಗಿದ್ದ ಟ್ಯಾಂಕರ್‌ಗಳನ್ನು ಈಗಾಗಲೇ ವಲಯವಾರು ನಿಯೋಜಿಸಲಾಗಿದ್ದು, ಆಯಾ ವಲಯ ಆಯುಕ್ತರಿಗೆ ಆಯಾ ವಲಯಗಳಿಗೆ ನೀಡಿರುವ ಟ್ಯಾಂಕರ್ ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ನೀರು ಪೂರೈಕೆ‌ ಮಾಡುವ ಪ್ರದೇಶದ ಮಾಹಿತಿಯನ್ನು ನೀಡಲಾಗಿದೆ” ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.

ಸ್ಟಿಕರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X