ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮುಂಜಾನೆ ವೇಳೆ ಮಂಜು ಹೆಚ್ಚಾಗಿದ್ದರಿಂದ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್‌ಗಳಿಗೆ ಅಪಘಾತ ಸಂಭವಿಸಿದೆ.
ನಿಂತಿದ್ದ ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ಇದನ್ನು ಕಂಡ ಹಿಂದೆ ಬರುತ್ತಿದ್ದ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ, ಹಿಂದೆ ಬರುತ್ತಿದ್ದ ಶಿವಗಂಗಾ ಬಸ್‌ಗೆ ಡಿಕ್ಕಿ ಹೊಡೆದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಕುರಿತು ಕರವೇ ಬೃಹತ್ ರ‍್ಯಾಲಿ, ಸಂಚಾರ ಅಸ್ತವ್ಯಸ್ತ
ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.