ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

Date:

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯಾಪ್ತಿಯ ಎಲ್ಲ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳನ್ನು ಸಾರ್ವತ್ರಿಕ ರಜಾ ದಿನವಾದ ಮಾರ್ಚ್‌ 29 ಹಾಗೂ ಮಾರ್ಚ್‌ 31ರಂದು ತೆರೆಯಲು ಬೆಸ್ಕಾಂ ನಿರ್ಧರಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬೆಸ್ಕಾಂ, “ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್‌ 10 ರಿಂದ ಮಾರ್ಚ್‌ 19ರವರೆಗೆ ಆನ್‌ ಲೈನ್‌ ವಿದ್ಯುತ್‌ ಸೇವೆಗಳು ಸ್ಥಗಿತಗೊಂಡಿದ್ದವು. ಈ ಅವಧಿಯಲ್ಲಿ ಗ್ರಾಹಕರಿಗೆ ವಿದ್ಯುತ್‌ ಬಿಲ್‌ ಪಾವತಿ ಸಾಧ್ಯವಾಗಿರಲಿಲ್ಲ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಹಾಗೆಯೇ, ತಂತ್ರಾಂಶ ಕಾರ್ಯಾರಂಭಗೊಂಡ ನಂತರ ಸರ್ವರ್‌ ಓವರ್‌ಲೋಡ್‌ ಆಗಿ ಆನ್‌ಲೈನ್‌ ವಿದ್ಯುತ್‌ ಸಂಬಂಧಿತ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ತಂತ್ರಾಂಶ ಉನ್ನತೀಕರಣದ ಹಿನ್ನೆಲೆ, ಗ್ರಾಹಕರು ಸಕಾಲದಲ್ಲಿ ವಿದ್ಯುತ್‌ ಬಿಲ್‌ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಾರ್ಚ್‌ 29 ಮತ್ತು 31ರಂದು ಬೆಸ್ಕಾಂನ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರುಗಳು ಕಾರ್ಯ ನಿರ್ವಹಿಸಲಿದೆ” ಎಂದು ಬೆಸ್ಕಾಂ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

“ತಂತ್ರಾಂಶ ಉನ್ನತೀಕರಣದ ಅವಧಿಯಲ್ಲಿ ಬಿಲ್‌ ಪಾವತಿಸಲು ಅಥವಾ ಇತರ ವಿದ್ಯುತ್‌ ಸೇವೆಗಳನ್ನು ಪಡೆಯಲು ಗ್ರಾಹಕರಿಗೆ ಸಾಧ್ಯವಾಗಿಲ್ಲ. ಹಾಗಾಗಿ, ವಿಳಂಬ ವಿದ್ಯುತ್‌ ಬಿಲ್‌ ಪಾವತಿಗೆ ಯಾವುದೇ ದಂಡ ಅಥವಾ ಬಡ್ಡಿ ವಿಧಿಸಲ್ಲ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...