ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.

- Advertisement -

ಮಳೆಯಿಲ್ಲದೇ, ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಾಗಿತ್ತು. ಮಳೆ ಕೊರತೆಯಿಂದ ಹೆಚ್ಚಿನ ಪ್ರಮಾಣದಲ್ಲಿ‌ ಫಸಲು ಬಂದಿಲ್ಲ. ಈ ಹಿನ್ನೆಲೆ, ಮಾರುಕಟ್ಟೆಗೆ ತರಕಾರಿಗಳು ಬರುತ್ತಿಲ್ಲ. ಹೀಗಾಗಿ, ತರಕಾರಿಗಳ ಬೆಲೆ ಗಗನಕ್ಕೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸದ್ಯ, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗುತ್ತಿದೆ. ಹೀಗಾಗಿ, ಮಾರುಕಟ್ಟೆಗೆ ಕಡಿಮೆ ಪ್ರಮಾಣದ ತರಕಾರಿ ಬರುತ್ತಿದ್ದು, ತರಕಾರಿಗಳಿಗೆ ಹೆಚ್ಚಿನ ಬೆಲೆ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ, ತರಕಾರಿಗಳ‌ ಬೆಲೆ‌ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಇನ್ನು ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ತರಕಾರಿಗಳ ದರ ಏರಿಕೆಯಾಗಿದೆ. ಆದರೆ, ಬಡವಾಣೆಗಳ, ಮನೆಗಳ ಬಳಿಯ ತರಕಾರಿ ಅಂಗಡಿಗಳು, ತಳ್ಳುವ ಗಾಡಿ ವ್ಯಾಪಾರಸ್ಥರು, ಹಾಪ್ ಕಾಮ್ಸ್​​​​ಗಗಳಲ್ಲಿ ತರಕಾರಿ ಬೆಲೆ ವಿಪರೀತ ಏರಿಕೆಯಾಗಿದೆ.

ಇಂದಿನ ತರಕಾರಿ ಬೆಲೆ

ಬಟಾಣಿ:140-180, ಬೆಂಡೆಕಾಯಿ:60-66, ಟೊಮೆಟೋ:30-60, ಆಲೂಗೆಡ್ಡೆ:30-56, ಹಾಗಲಕಾಯಿ:60- 82, ಗೋರಿಕಾಯಿ:50-89, ಹಸಿ ಮೆಣಸಿನಕಾಯಿ:80-106, ಬಿಟ್ರೋಟ್: 40-46, ಈರುಳ್ಳಿ:20-39, ಕ್ಯಾರೇಟ್: 80-82, ಬೀನ್ಸ್:220-220, ನವಿಲುಕೋಸು:60-102, ಬದನೆಕಾಯಿ:60-70, ದಪ್ಪ ಮೆಣಸಿನಕಾಯಿ:40- 65, ಸೋರೆಕಾಯಿ:40-50, ಬೆಳ್ಳುಳ್ಳಿ: 300-338, ಶುಂಠಿ:180-195, ಪಡುವಲಕಾಯಿ: 30-60 ರೂಪಾಯಿ ಇದೆ.

ವಿಜಯನಗರ ಸೇರಿದಂತೆ ನಗರದ ವಿವಿಧೆಡೆ ಒಂದು ಕಟ್ಟು ನಾಟಿ ಕೊತ್ತಂಬರಿ ಸೊಪ್ಪು ಬರೋಬ್ಬರಿ ₹100 ಮಾರಾಟವಾಗುತ್ತಿದೆ. ಇನ್ನು ಕಳೆದ ವಾರ ಬೀನ್ಸ್ ಬೆಲೆ ಬರೋಬ್ಬರಿ ₹200 ಇತ್ತು. ಇದೀಗ ₹220 ಆಗಿದೆ. ಸೌತೆಕಾಯಿ ಹಾಗೂ ಲಿಂಬೆಹಣ್ಣಿನ ಬೆಲೆ ಕೂಡ ಜಾಸ್ತಿಯಾಗಿದೆ. ಬೀನ್ಸ್ ಬಟಾಣಿ ಬೆಲೆ ಗ್ರಾಹಕರ ಕೈ ತಪ್ಪಿ ಹೋಗಿದ್ದು, ಬೆಲೆ ಕೇಳಿದ ಗ್ರಾಹಕರು ಖಾಲಿ ಚೀಲ ಹಿಡಿದುಕೊಂಡು ವಾಪಸ್ ಮನೆಗೆ ಹೋಗುವಂತಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿರುವ ಜನರಿಗೆ ತರಕಾರಿ ಖರೀದಿ ಕಷ್ಟವಾಗಿದೆ. ಬೇಡಿಕೆಗೆ ತಕ್ಕಂತ ತರಕಾರಿ ಇಲ್ಲದೇ ಇರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ದರ ಏರಿಕೆಯಾದ ಹಿನ್ನೆಲೆ, ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಕೆಜಿ ಖರೀದಿ ಮಾಡುತ್ತಿದ್ದ ಜನರು ಅರ್ಧ ಕೆಜಿ ಖರೀದಿ ಮಾಡುತ್ತಾರೆ. ಇದರಿಂದ ವ್ಯಾಪಾರ ಕುಂಠಿತವಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...