ಬೆಂಗಳೂರು | ತಂದೆಯನ್ನು ರಕ್ಷಿಸಲು ಕೊಲೆ ಆರೋಪಿಯಾದ ಮಗ: ತಂದೆ-ಮಗನ ಬಂಧನ

Date:

ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಅಪ್ತಾಪ್ತ ವಯಸ್ಸಿನ ಮಗ ತನ್ನ ತಾಯಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ತಂದೆಯನ್ನು ಕೊಲೆ ಕೇಸ್‌ನಿಂದ ರಕ್ಷಣೆ ಮಾಡಲು ಮಗನೇ ಕೊಲೆ ಆರೋಪವನ್ನು ತನ್ನ ಮೇಲೆ ಎಳೆದುಕೊಂಡು ಶರಣಾಗಿದ್ದ ಎಂಬ ಸಂಗತಿಯನ್ನು ಇದೀಗ ಪೊಲೀಸರು ಭೇದಿಸಿದ್ದಾರೆ.

- Advertisement -

ಹೌದು, ಅಪ್ರಾಪ್ತ ಬಾಲಕನೊಬ್ಬ ತಾನು ತನ್ನ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದನು. ಪ್ರಕರಣದ ತನಿಖೆ ನಡೆಸಿದ ಕೆ.ಆರ್.ಪುರ ಠಾಣಾ ಪೊಲೀಸರು ಹತ್ಯೆ ಪ್ರಕರಣದ ಸತ್ಯ ಸಂಗತಿಯನ್ನು ಬಯಲು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಿಳೆಯನ್ನು ಕೊಲೆ ಮಾಡಲು ಬಳಸಲಾಗಿದ್ದ ಕಬ್ಬಿಣದ ರಾಡ್‌ನಲ್ಲಿ ಎರಡು ವಿಭಿನ್ನ ಫಿಂಗರ್ ಪ್ರಿಂಟ್ ಪತ್ತೆಯಾಗಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿ ರಾಡ್​ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ​ಗೆ ಕಳುಹಿಸಿದ್ದಾರೆ. ಈ ವೇಳೆ ರಾಡ್ ಮೇಲೆ ಇಬ್ಬರ ಫಿಂಗರ್ ಪ್ರಿಂಟ್ ಇರುವುದು ಗೊತ್ತಾಗಿದೆ. ತಂದೆ-ಮಗ ಇಬ್ಬರೂ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಆರೋಪಿ ಪತಿ ಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಪ್ರಕರಣ?

ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ತಿಂಡಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಫೆಬ್ರವರಿ 2ರಂದು ಹತ್ಯೆ ನಡೆದಿತ್ತು. ಗಲಾಟೆಯಲ್ಲಿ ತಾಯಿ ನೇತ್ರಾವತಿ (40) ಅವರನ್ನ ರಾಡ್‌ನಿಂದ ಹೊಡೆದು ಕೊಲೆ ಮಾಡಲಾಗಿತ್ತು.

ಮೃತಳ ಮಗ ತಾನೇ ತನ್ನ ತಾಯಿಯನ್ನು ಕೊಲೆ ಮಾಡಿರುವುದಾಗಿ ಶರಣಾಗಿದ್ದನು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಆರಂಭಿಸಿದ ಬಳಿಕ ಸತ್ಯ ಹೊರಬಿದ್ದಿದೆ.

ಮಹಿಳೆಯ ಕೊಲೆಗೆ ಕಾರಣ

ಗಂಡ-ಹೆಂಡತಿ ಮಗ ಮೂವರು ಒಂದೇ ಮನೆಯಲ್ಲಿದ್ದರು. “ಪತ್ನಿ ನೇತ್ರಾವತಿ ವಿವಾಹೇತರ ಸಂಬಂಧ ಹೊಂದಿದ್ದಳು. ಆಕೆಗೆ ಮದ್ಯಪಾನದ ಅಭ್ಯಾಸವಿತ್ತು. ಅಲ್ಲದೇ, ಆಕೆ ಒಮ್ಮೊಮ್ಮೆ ಮನೆ ಬಿಟ್ಟು ಹೋದರೇ ಎರಡು-ಮೂರು ದಿನವಾದರೂ ಮನೆಗೆ ಬರುತ್ತಿರಲಿಲ್ಲ. ಈ ಸಮಯದಲ್ಲಿ ನಾವು ಉಪವಾಸ ಇರಬೇಕಿತ್ತು. ಈ ಬಗ್ಗೆ ನೇತ್ರಾವತಿಗೆ ಪ್ರಶ್ನೆ ಮಾಡಿದರೇ, ನಮ್ಮ ಮೇಲೆಯೇ ಜೋರು ಮಾಡಿ ಜಗಳ ಮಾಡುತ್ತಿದ್ದಳು. ಹಾಗಾಗಿ, ಮಗನ ಜತೆಗೆ ಸೇರಿ ಹತ್ಯೆ ಮಾಡಲು ನಿರ್ಧಾರ ಮಾಡಿದೆ” ಎಂದು ಬಂಧಿತ ಆರೋಪಿ ಚಂದ್ರಪ್ಪ ಒಪ್ಪಿಕೊಂಡಿದ್ದಾನೆ.

ಅಪ್ಪನನ್ನ ರಕ್ಷಿಸೋಕೆ ಜೈಲು ಸೇರಿದ ಮಗ

ತಂದೆ-ಮಗ ಸೇರಿಕೊಂಡು ಮಹಿಳೆಯನ್ನು ಕೊಲೆ ಮಾಡಿದ್ದರು. ಬಳಿಕ, ತಂದೆಯನ್ನ ರಕ್ಷಿಸಲು ಅಪ್ರಾಪ್ತ ಮಗ ಆರೋಪವನ್ನು ತನ್ನ ಮೇಲೆ ಹಾಕಿಕೊಂಡು ಜೈಲಿಗೆ ಸೇರಿದ್ದನು. ಆರೋಪವನ್ನು ಸಾಬೀತು ಮಾಡಲು ತನ್ನ ತಂದೆ ಕೈಯಲಿದ್ದ ರಾಡ್​ ತೆಗೆದುಕೊಂಡು ತಾನೂ ತನ್ನ ತಾಯಿಗೆ ಒಂದೆರಡು ಏಟು ಹೊಡೆದಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೈಲಿಗೆ ಹೋದರೆ ಉತ್ತಮ ಶಿಕ್ಷಣ

“ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತದೆ. ವಿದ್ಯಾಭ್ಯಾಸವನ್ನು ಕೊಡಿಸುತ್ತಾರೆ. ನಾನು ಹೊರಗಡೆ ಬರೋವಷ್ಟರಲ್ಲಿ ನೀನು ಚೆನ್ನಾಗಿ ಹಣ ಮಾಡಿಕೊಂಡಿರು” ಎಂದು ಅಪ್ರಾಪ್ತ ಮಗ ತನ್ನ ತಂದೆಗೆ ಓಲೈಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವಂತೆ ಆಗ್ರಹ

ಇತ್ತಕಡೆ ನೇತ್ರಾ ಸತ್ತಿರುವುದು ಖಚಿತವಾದ ಬಳಿಕ ಚಂದ್ರಪ್ಪ ಅಲ್ಲಿಂದ ಪರಾರಿಯಾಗಿದ್ದನು. ಮಗ ಪೊಲೀಸರಿಗೆ ಶರಣಾಗಿದ್ದನು. ಸದ್ಯ ಮಗನೊಂದಿಗೆ ಅಪ್ಪನನ್ನು ಸಹ ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...