ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಶ್ರೀರಾಮನ ಕಟೌಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ, ಶ್ರೀರಾಮನ ಕಟೌಟ್ ಹಾಕಲಾಗಿತ್ತು. ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವುಗೊಳಿಸಿರಲಿಲ್ಲ.
ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ
ಏಕಾಏಕಿ ಕಟೌಟ್ ಜನವರಿ 31ರಂದು ಕೆಳಗೆ ಬಿದ್ದಿದೆ. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.