ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯ

Date:

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್‌ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಎಚ್‌ಎಎಲ್ ಏರ್‌ಪೋರ್ಟ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಶ್ರೀರಾಮನ ಕಟೌಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ, ಶ್ರೀರಾಮನ ಕಟೌಟ್ ಹಾಕಲಾಗಿತ್ತು. ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವುಗೊಳಿಸಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ

ಏಕಾಏಕಿ ಕಟೌಟ್‌ ಜನವರಿ 31ರಂದು ಕೆಳಗೆ ಬಿದ್ದಿದೆ. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...