ಬೆಂಗಳೂರು | ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್​ ಚಾಲಕರ ವಿರುದ್ಧ ಕಠಿಣ ಕ್ರಮ

Date:

“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್‌ ಚಾಲಕರನ್ನು ಬೆಂಗಳೂರು ಸಂಚಾರ ಪೊಲೀಸರು ಕಂಡು ಹಿಡಿದಿದ್ದು, ಇದೀಗ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಸಂಚಾರ ಪೊಲೀಸರು ಗುರುವಾರ ಖಾಸಗಿ ಬಸ್ ಚಾಲಕರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಗುರುವಾರ 881 ಬಸ್​ ಚಾಲಕರನ್ನು ಪರಿಶೀಲನೆ ಮಾಡಿದ್ದು, ಈ ಪೈಕಿ 9 ಚಾಲಕರು ಮದ್ಯಪಾನ ಮಾಡಿದ್ದು ಕಂಡುಬಂದಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಒಂದೊಂದು ಬಸ್‌ನಲ್ಲಿ 50 ರಿಂದ 55 ಜನ ಪ್ರಯಾಣ ಮಾಡುತ್ತಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ, ಎಲ್ಲರಿಗೂ ಅಪಾಯ. ಇದೀಗ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದೇವೆ. ಡಿಎಲ್‌ ಅಮಾನತು ಮಾಡಲು ಆರ್‌ಟಿಒಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಬಸ್ ಮಾಲೀಕರಿಗೂ ನೋಟಿಸ್ ನೀಡಲಾಗಿದೆ” ಎಂದಿದ್ದಾರೆ.

“ಬೆಂಗಳೂರಿನಲ್ಲಿ ಆಟೋ ಚಾಲಕರು ಹೆಚ್ಚಿನ ಹಣ ಕೇಳುತ್ತಾರೆ ಹಾಗೂ ಪ್ರಯಾಣಿಕರು ಕರೆದ ಕಡೆಗೆ ಬರುವುದಿಲ್ಲ. ಸಂಚಾರ ನಿಯಮಗಳನ್ನು ಪಾಲನೆ ಮಾಡದೇ, ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಾರೆ ಸೇರಿದಂತೆ ಹಲವಾರು ದೂರುಗಳು ಬಂದಿವೆ. ಕಳೆದ ವರ್ಷ 24 ಖಾಸಗಿ ಬಸ್ ಅಪಘಾತವಾಗಿವೆ. ಇದರಲ್ಲಿ ಹೆಚ್ಚಾಗಿ ಪಾದಚಾರಿಗಳು ಮರಣ ಹೊಂದಿದ್ದಾರೆ. ರಸ್ತೆ ಸುರಕ್ಷತೆ ಹೆಚ್ಚಿಸಲು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಲು ಸಾಲು ರಜೆಯಿಂದ ಸಂಚಾರ ದಟ್ಟಣೆ : ತಮ್ಮ ಊರಿನತ್ತ ಮುಖ ಮಾಡಿದ ಜನರು

“ಖಾಸಗಿ ವಾಹನ, ವಾಟರ್ ಟ್ಯಾಂಕರ್, ಬಿಬಿಎಂಪಿ ಕಸದ ಲಾರಿಯಿಂದ ಹೆಚ್ಚಾಗಿ ಅಪಘಾತಗಳು ಸಂಭವಿಸಿವೆ. ಅವರ ಮೇಲೆ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ” ಎಂದು ತಿಳಿಸಿದ್ದಾರೆ.

“ಅಲ್ಲದೇ, ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ವಾಟರ್ ಟ್ಯಾಂಕರ್ ಚಾಲಕರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು 127 ವಾಹನಗಳ ತಪಾಸಣೆ ನಡೆಸಿದ್ದು, ಯಾವುದೇ ಚಾಲಕರು ಮದ್ಯಪಾನ ಮಾಡದಿರುವುದು ಕಂಡುಬಂದಿದೆ. ಇತರೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ಚಾಲಕರುಗಳ ವಿರುದ್ಧ 16 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...