ಬೆಂಗಳೂರು | ಮಹಿಳೆಗೆ ಬೆದರಿಸಿ ಹಣ ಸುಲಿಗೆ; ನಾಲ್ವರು ಪೊಲೀಸರ ಅಮಾನತು

Date:

ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000 ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್​ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್​ಟೇಬಲ್​ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದ ಶನಿವಾರ ಇಸ್ರೋ ಜಂಕ್ಷನ್‌ ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಈ ಕೃತ್ಯ ನಡೆದಿತ್ತು. ಈ ಬಗ್ಗೆ ಆಯುಕ್ತ ದಯಾನಂದ್ ಅವರಿಗೆ ‘ಎಕ್ಸ್‌’ ತಾಣದಲ್ಲಿ ಸಂತ್ರಸ್ತೆ ತಂದೆ ದೂರು ನೀಡಿದ್ದರು.

ಈ ಬಗ್ಗೆ ಇಲಾಖಾ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಪೂರ್ವ ವಿಭಾಗ (ಸಂಚಾರ)ದ ಡಿಸಿಪಿ ಕುಲದೀಪ್ ಆರ್.ಜೈನ್ ರವರಿಗೆ ಆಯುಕ್ತರು ಸೂಚನೆ ನೀಡಿದ್ದರು. ಡಿಸಿಪಿ ನೀಡಿದ ವರದಿ ಮೇರೆಗೆ ಕರ್ತವ್ಯಲೋಪವೆಸಗಿದ ಕಾರಣ ಇನ್ಸ್‌ಪೆಕ್ಟರ್‌ ಹಾಗೂ ಮೂವರು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಏನಿದು ಘಟನೆ?

ಇಸ್ರೋ ಜಂಕ್ಷನ್‌ನಲ್ಲಿ ಕಳೆದ ಶನಿವಾರ ರಾತ್ರಿಯ ಸಮಯದಲ್ಲಿ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಮಣಿಪಾಲ್ ಆಸ್ಪತ್ರೆ ಕಡೆಯಿಂದ ಬಂದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿದ್ದರು.

ಈ ವೇಳೆ, ಆಲ್ಕೋಮೀಟರ್‌ ಮೂಲಕ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗೊಳಪಡಿಸಿದಾಗ ಮಹಿಳೆ ಮದ್ಯ ಸೇವಿಸದೆ ಇದ್ದರೂ ₹15 ಸಾವಿರ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು. ಕೊನೆಗೆ ಮಹಿಳೆಯನ್ನು ಬೆದರಿಸಿ ಈ ನಾಲ್ವರು ಸಂಚಾರ ಪೊಲೀಸರು ಮಹಿಳೆಯಿಂದ ₹8,000 ಹಣವನ್ನು ಗೂಗಲ್ ಪೇ ಮೂಲಕ ಪಡೆದು ಆಕೆಯನ್ನು ಪೊಲೀಸರು ಕಳುಹಿಸಿದ್ದರು ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಮಹಿಳೆಯ ತಂದೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ, “ಸಂಚಾರ ಪೊಲೀಸರು ನನ್ನ ಮಗಳಿಂದ ಹಣ ಸುಲಿಗೆ ಮಾಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದರು. ಎಕ್ಸ್‌ನಲ್ಲಿ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ಈ ಹಿನ್ನೆಲೆ, ತನಿಖೆಗೆ ಆದೇಶಿಸಲಾಗಿತ್ತು. ಆನಂತರ ಈ ಕುರಿತು ತನಿಖೆ ನಡೆಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಪೂರ್ವ ಸಂಚಾರ ಡಿಸಿಪಿ ಕುಲದೀಪ ಕುಮಾರ್ ಜೈನ್ ಇಲಾಖೆ ಮಟ್ಟದ ತನಿಖೆ ನಡೆಸಿ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಸದ್ಯ ಪೊಲೀಸರು ತಪ್ಪಿತಸ್ಥರು ಎಂದು ಸಾಬೀತಾಗಿದ್ದು, ನಾಲ್ವರನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....