ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ಇಂಡಿಯಾ ಹಾಗೂ ಆಫ್ಘಾನಿಸ್ತಾನ ನಡುವೆ ಟಿ-20 ಹೊನಲು ಬೆಳಕಿನ ಪಂದ್ಯ ನಡೆಯಲಿದೆ. ಈ ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ, ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೆಚ್ಚುವರಿ ಬಸ್ ಸೇವೆಯನ್ನು ಒದಗಿಸಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಕೆಂಗೇರಿ ಕೆಎಚ್ಬಿ ವಸತಿ ಗೃಹಗಳು, ಜನಪ್ರಿಯ ಟೌನ್ಶಿಪ್ ನೆಲಮಂಗಲ, ಯಲಹಂಕ 5ನೇ ಹಂತ, ಆರ್ಕೆ ಹೆಗಡೆನಗರ–ಯಲಹಂಕ, ಬಾಗಲೂರು, ಹೊಸಕೋಟೆ ಸೇರಿದಂತೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿವೆ.
ಮಾರ್ಗಸಂಖ್ಯೆ ಎಸ್ಬಿಎಸ್ -1ಕೆ ಬಸ್ ಎಚ್ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೇಸ್‌ಕೋರ್ಸ್ ಮೇಲೆ ಸಿಸಿಬಿ ದಾಳಿ; ₹3 ಕೋಟಿ 47 ಲಕ್ಷ ಹಣ ಜಪ್ತಿ
ಜಿ-6 ಬಸ್ ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್ಬಿ ಕ್ವಾಟ್ರರ್‍ಸ್ ತಲುಪಿದರೆ ಜಿ-7 ಬಸ್ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ಶಿಪ್ ಹಾಗೂ ಜಿ-8 ಬಸ್ ಯಶವಂತಪುರ ಮಾರ್ಗವಾಗಿ ನೆಲಮಂಗಲ ಸಂಚರಿಸಲಿದೆ. ಜಿ-9 ಬಸ್ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ಜಿ-10ರ ಬಸ್ ನಾಗವಾರ, ಟ್ಯಾನರಿ ರಸ್ತೆ ಮೂಲಕ ಹೆಗಡೆನಗರ, ಯಲಹಂಕ ತಲುಪಲಿದೆ.
ಜಿ-11ರ ಬಸ್ ಹೆಣ್ಣೂರು ರಸ್ತೆ ಮೂಲಕ ಬಾಗಲೂರುವರೆಗೆ ಸಂಚರಿಸಲಿದ್ದು, ಕೆಎಚ್ಬಿ-12 ಎಚ್ಕೆ ಬಸ್ ಟಿನ್ ಫ್ಯಾಕ್ಟ್ರಿ ಮೂಲಕ ಹೊಸಕೋಟೆವರೆಗೂ ಸಂಚರಿಸಲಿದೆ ಎಂದು ಬಿಎಂಟಿಸಿ ತಿಳಿಸಿದೆ.