ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

Date:

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಎಲ್ಲಿಯೂ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಲಯ ಕಚೇರಿಯಲ್ಲಿ ನಡೆಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ಪೂರೈಕೆ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ 46 ಶುದ್ಧ ಕುಡಿಯುವ ನೀರಿನ ಘಕಟಗಳು ಬರಲಿದ್ದು, 42 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 4 ಘಟಕಗಳು ಸ್ಥಗಿತಗೊಂಡಿದ್ದು, ಸದ್ಯ ಇರುವ ಘಟಕಗಳಿಗೆ ಕೂಡಲೇ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಪೂರೈಕೆ ಮಾಡಬೇಕು” ಎಂದರು.

“ಜಲಮಂಡಳಿಯ ಜಲಗಾರಗಳಲ್ಲಿ ಏಕ ಕಾಲದಲ್ಲಿ ಮೂರು/ನಾಲ್ಕು ಟ್ಯಾಂಕರ್ ಗಳಿಗೆ ನೀರು ಪೂರೈಕೆ ಮಾಡುವ ಹಾಗೇ ಪೈಪ್ ಅಳವಡಿಸಿಕೊಂಡು ನೀರಿನ ಸಮಸ್ಯೆಯಿರುವ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಎಷ್ಟು ಕೊಳವೆ ಬಾವಿಗಳು ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ, ಎಷ್ಟು ಬತ್ತಿ ಹೋಗಿವೆ. ಎಷ್ಟು ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆಯಿದೆ. ಯಂತ್ರಗಳು ಹಾಳಾಗಿವೆ, ಎಲ್ಲೆಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಬೇಕಿದೆ ಎಂಬುದನ್ನು ಸರಿಯಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.

ನೋಂದಣಿಯಾದ ಟ್ಯಾಂಕರ್‌ಗಳು ಸ್ಟಿಕ್ಕರ್ ಅಂಟಿಸಬೇಕು

“ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಸ್ಟಿಕರ್‌ಗಳನ್ನು ಅಂಟಿಸಿಕೊಳ್ಳಬೇಕಿದೆ” ಎಂದು ತಿಳಿಸಿದರು.

“ಪ್ರತಿ ಟ್ಯಾಂಕರ್ ಮಾಲೀಕರು ಸ್ವಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕರ್‌ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಸ್ಟಿಕ್ಕರ್ ಅಂಟಿಸದಿರುವ ಟ್ಯಾಂಕರ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

ಈ ವೇಳೆ ವಲಯ ಆಯುಕ್ತರಾದ ರಮೇಶ್, ವಿಪತ್ತು ನಿರ್ವಹಣೆಯ ನೋಡಲ್ ಅಧಿಕಾರಿಯಾದ ಸುರೋಳ್ಕರ್ ವಿಕೋಸ್ ಕಿಶೋರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...