ಬೆಂಗಳೂರು | ವಿಜಯನಗರ ಹೋಟೆಲ್​ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಬಂಧನ

Date:

ಬೆಂಗಳೂರಿನ ವಿಜಯನಗರ ಹೋಟೆಲ್‌ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ”ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ” ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

- Advertisement -

ಚಂದನ್ ಬಂಧಿತ ಆರೋಪಿ. ಈತ ಬೆಂಗಳೂರಿನ ಹಂಪಿನಗರ ನಿವಾಸಿಯಾಗಿದ್ದು, ಗ್ಯಾಸ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಂಗಳೂರಿನ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಯುವತಿಯೊಬ್ಬರ ಜತೆ ಬಂಧಿತ ಆರೋಪಿ ಅಸಭ್ಯವಾಗಿ ವರ್ತಿಸಿದ್ದನು. ಈ ಘಟನೆಗೆ ಸಾಕ್ಷಿಯಾಗಿದ್ದ ವಿಜಯನಗರ ಹೋಟೆಲ್ ಮಹಿಳಾ ಕ್ಯಾಷಿಯರ್ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಏನಿದು ಪ್ರಕರಣ?

ಬಂಧಿತ ಆರೋಪಿ ಚಂದನ ತನ್ನ ಸ್ನೇಹಿತರ ಜತೆಗೆ, ಡಿಸೆಂಬರ್ 30ರಂದು ಸಂಜೆ 7:30ರ ಸುಮಾರಿಗೆ ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ವೊಂದಕ್ಕೆ ತಿಂಡಿ ತಿನ್ನಲು ಬಂದಿದ್ದರು. ತಿಂಡಿ ತಿಂದು ಹೋಟೆಲ್‌ನಲ್ಲಿ ನಿಂತು ಮೂವರು ಸ್ನೇಹಿತರು ಮಾತನಾಡುತ್ತಿದ್ದರು.

ಇದೇ ಸಮಯಕ್ಕೆ ಹೋಟೆಲ್‌ಗೆ ಬಂದ ಯುವತಿಯೊಬ್ಬರು ಕ್ಯಾಷ್‌ ಕೌಂಟರ್‌ನಲ್ಲಿ ಇರುವುದನ್ನು ಮೂವರು ಗಮನಿಸಿದ್ದಾರೆ. ಈ ವೇಳೆ, ಬಂಧಿತ ಆರೋಪಿ ಚಂದನ್ ಯುವತಿಯ ಬಳಿ ಬಂದು ಹಿಂಬದಿಯಿಂದ ಆಕೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ. ಚಂದನ್ ಯುವತಿಯನ್ನು ಮುಟ್ಟಿದ ಬಳಿಕ ಆತನ ಸ್ನೇಹಿತರು ಶಿಳ್ಳೆ ಹೊಡೆದಿದ್ದಾರೆ.

ಈ ವೇಳೆ, ಯುವತಿ ಗಲಾಟೆ ಆರಂಭಿಸಿದಾಗ ಹೋಟೆಲ್‌ನಲ್ಲಿ ಜನ ಜಮಾಯಿಸಿದ್ದಾರೆ. ಆರೋಪಿ ಯುವಕರು ಈ ವೇಳೆ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯ ಹೋಟೆಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಘಟನೆಯ ಪ್ರತ್ಯಕ್ಷದರ್ಶಿ ಮಹಿಳಾ ಕ್ಯಾಷಿಯರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ನಡೆಸುವ ಸಂಚಿಗೆ ಸಂಬಂಧಿಸಿದ್ದು) ಮತ್ತು 509 (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ವಿಶ್ವದ ‘ಕುಖ್ಯಾತ ಮಾರುಕಟ್ಟೆ’ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಸ್‌ಪಿ ರೋಡ್ ಉಲ್ಲೇಖ

ಸ್ನೇಹಿತರೊಬ್ಬರು ಸವಾಲು ಹಾಕಿದ್ದರಿಂದ ಮಹಿಳೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಬುಧವಾರ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...