ಬೆಂಗಳೂರು | ಮಕ್ಕಳ ನಾಪತ್ತೆ ಪ್ರಕರಣ ಶೇ.34 ರಷ್ಟು ಏರಿಕೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳು ಶೇ.34 ರಷ್ಟು ಏರಿಕೆಯಾಗಿದೆ.

ಚೈಲ್ಡ್ ರೈಟ್ ಸಂಸ್ಥೆ ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು, “ಇತ್ತೀಚಿನ ದಿನಗಳಲ್ಲಿ ಮಕ್ಕಳು ಸಣ್ಣ-ಪುಟ್ಟ ಕಾರಣಗಳಿಗೆ ಮನೆ ಬಿಟ್ಟು ತೆರಳುತ್ತಿದ್ದಾರೆ. ರಿಮೋಟ್ ಕೊಟ್ಟಿಲ್ಲ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿಲ್ಲ, ತಂದೆ-ತಾಯಿ ಜಗಳ ಕಿರಿಕಿರಿಗೆ ಮಕ್ಕಳು ಮನೆ ಬಿಟ್ಟು ಹೋಗುವ ನಿರ್ಧಾರ ಮಾಡುತ್ತಿದ್ದಾರೆ” ಎಂದು ಹೇಳಿದೆ.

“ಮನೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯುವುದನ್ನು ಪೋಷಕರು ಕಡಿಮೆ ಮಾಡಿದ್ದಾರೆ. ಮನಸ್ಸಿನ ದುಗುಡ ಹೇಳಿಕೊಳ್ಳಲಾರದೆ ಮಕ್ಕಳಿಗೆ ಒತ್ತಡ ಹೆಚ್ಚಾಗಿದೆ‌. ಕೌಟುಂಬಿಕ ಒತ್ತಡದಿಂದ ಮಕ್ಕಳು ಹೆಚ್ಚಾಗಿ ಮನೆ ಬಿಡುತ್ತಿದ್ದಾರೆ” ಎಂದು ಚೈಲ್ಡ್ ರೈಟ್ ಸಂಸ್ಥೆ ತಿಳಿಸಿದೆ.

Advertisements

“ಮಕ್ಕಳನ್ನು ಟ್ರೇಸ್ ಮಾಡುವುದು ಕಷ್ಟಕರವಾಗಿದೆ. 100% ಪೈಕಿ ಕೇವಲ 85% ಮಕ್ಕಳು ಮಾತ್ರ ಪತ್ತೆಯಾಗಿದ್ದಾರೆ. ಇನ್ನುಳಿದ ಮಕ್ಕಳು ನಾಪತ್ತೆಯಾಗಿದ್ದಾರೆ. ಕಳೆದ ವರ್ಷ ಇದರ ಸಂಖ್ಯೆ ಕೂಡ ಶೇಕಾಡ 58% ಏರಿಕೆಯಾಗಿದೆ” ಎಂದಿದೆ.

  • 2020ರಲ್ಲಿ 1,557 ಮಕ್ಕಳು ನಾಪತ್ತೆಯಾಗಿದ್ದರು. ಈ ಪೈಕಿ 421 ಗಂಡು, 1136 ಹೆಣ್ಣು ಮಕ್ಕಳಿದ್ದರು. ಆದರೆ, ಈ ಮಕ್ಕಳಲ್ಲಿ ಇನ್ನು 21 ಗಂಡು, 37 ಹೆಣ್ಣು ಮಕ್ಕಳನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ.
  • 2021ರಲ್ಲಿ 2,118 ಮಕ್ಕಳು ನಾಪತ್ತೆಯಾಗಿದ್ದರು. ಈ ಪೈಕಿ 488 ಗಂಡು, 1,630 ಹೆಣ್ಣುಮಕ್ಕಳಿದ್ದರು. ಇದರಲ್ಲಿ 28 ಗಂಡು, 64 ಹೆಣ್ಣು ಮಕ್ಕಳ ಇನ್ನೂ ಪತ್ತೆ ಆಗಿಲ್ಲ.
  • 2022 ಹಾಗೂ 2023ರಲ್ಲಿ 5,144 ಮಕ್ಕಳು ನಾಪತ್ತೆಯಾಗಿದ್ದರು. ಈ ಮಕ್ಕಳ ಪೈಕಿ 934 ಮಕ್ಕಳನ್ನ ಪತ್ತೆ ಮಾಡಬೇಕಾಗಿದೆ.
  • 347 ಗಂಡು ಹಾಗೂ 853 ಹೆಣ್ಣು ಮಕ್ಕಳು ಸೇರಿ ಒಟ್ಟು 1,200 ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X